ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿನ ಎಲ್ಲ ದೇವಾಲಯಗಳಲ್ಲಿ ಇಂದಿನಿಂದ ಎಲ್ಲ ರೀತಿಯ ಸೇವೆಗಳನ್ನು ರದ್ದು ಮಾಡುವಂತೆ ಸೂಚಿಸಲಾಗಿದೆ.
ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ದೈವಸ್ಥಾನದ ಉತ್ಸವಗಳಲ್ಲಿ ಅಲ್ಲಿನ ಸಿಬ್ಬಂದಿಗಳಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶವಿದ್ದು, ಉಳಿದಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದು ಮಾಡುವಂತೆ ಸೂಚಿಸಲಾಗಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಬೀಚ್’ಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ, ಬೀಚ್’ಗಳಿಗೆ ಜನರು ಪ್ರವೇಶಿಸಿದರೆ ಮುಲಾಜಿಲ್ಲದೇ ದಂಡ ಹಾಕಿ ಎಂದು ಸೂಚಿಸಲಾಗಿದೆ.
ಅಲ್ಲದೇ, ರೈಲ್ವೆ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲು ಸೂಚಿಸಲಾಗಿದ್ದು, ಸೋಂಕು ತಡೆಗೆ ಆರೋಗ್ಯ ಇಲಾಖೆ ಸೂಚಿಸಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.
Get in Touch With Us info@kalpa.news Whatsapp: 9481252093
















