ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದ್ದು, ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ಗ್ರಾಮೀಣ ಭಾಗದಲ್ಲೂ ಯುವಕರು ಈ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಯುವಕರು ಜಾಗೃತಿ ಮೂಡಿಸುತ್ತಿದ್ದಾರೆ.
ಗ್ರಾಮದಲ್ಲಿ ಜನರು ಸೇರುವ ವ್ಯಾಪಾರ-ವ್ಯವಹಾರ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ.
ಗ್ರಾಮದಲ್ಲಿರುವ ಎಲ್ಲ ದಿನಸಿ ಅಂಗಡಿ, ಎಟಿಎಂ, ಕುಡಿಯುವ ನೀರಿನ ಘಟಕಗಳ ಮುಂದೆ ಅಂತರ ಕಾಯ್ದುಕೊಳ್ಳಲು ಬಾಕ್ಸ್’ಗಳನ್ನು ನಿರ್ಮಿಸಲಾಗಿದೆ.
ಗ್ರಾಮದ ಯುವ ಮುಖಂಡ ಆರ್.ಎನ್. ರುದ್ರೇಶ್ ನೇತೃತ್ವದಲ್ಲಿ ಈ ಕಾರ್ಯ ಮಾಡಲಾಗಿದ್ದು, ಸ್ವಚ್ಛತೆ ಕಾಪಾಡುವ ಜೊತೆಯಲ್ಲಿ ಅಂತರ ಕಾಯ್ದುಕೊಂಡು ಸೋಂಕು ಹರಡದಂತೆ ತಡೆಯಲು ಕೈಜೋಡಿಸುವಂತೆ ಜಾಗೃತಿ ಮೂಡಿಸಲಾಯಿತು.
Get in Touch With Us info@kalpa.news Whatsapp: 9481252093
Discussion about this post