No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-1 ಬ್ರಹ್ಮ ಪುರಾಣ

ಹೇಗೂ ಲಾಕ್’ಡೌನ್ ಹಿನ್ನೆಲೆ ಮನೆಯಲ್ಲೇ ಇದ್ದೀರಿ: ಡಾ.ಗುರುರಾಜ ಪೋಶೆಟ್ಟಿಹಳ್ಳಿ ಒಳ್ಳೆಯ ಮಾಹಿತಿ ಲೇಖನ ಬರೆಯುತ್ತಾರೆ-18 ದಿನ ಓದಿ ಪುಣ್ಯ ಸಂಪಾದಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-1 ಬ್ರಹ್ಮ ಪುರಾಣ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪುರಾ (ಹಿಂದೆ) ನವಂ (ಹೊಸದು) ಎಂದು ಪುರಾಣಪದದ ವ್ಯುತ್ಪತ್ತಿಯನ್ನು ಹೇಳುವುದೊಂದು ಚಮತ್ಕಾರ. ಪುರಾ (ಹಿಂದಕ್ಕೆ) ನೀಯತೇ (ಒಯ್ಯಲ್ಪಡುತ್ತದೆ) ಎಂಬುದಿ ನ್ನೊಂದು ನಿರುಕ್ತಿ. ಬ್ರಾಹ್ಮಣ ಗ್ರಂಥಗಳಲ್ಲಿ ಬಳಸಲಾಗಿರುವ ಪುರಾಣವೆಂಬ ಪದಕ್ಕೆ ಕೇವಲ ಹಳೆಯ ಕತೆ ಎಂದಿಷ್ಟೇ ಅರ್ಥ. ಅದು ಇತಿಹಾಸ ಮತ್ತು ನಾರಾಶಂಸಿಗಳ ಸಾಲಿಗೆ ಸೇರಿದ್ದು. ಬಾಯಿಂದ ಬಾಯಿಗೆ ಹರಿದುಬಂದ ಹಳಗತೆಯ ರೂಪದಲ್ಲಿದ್ದ ಪುರಾಣವಸ್ತು ಕೆಲ ಅಂಶಗಳಲ್ಲಿ ವೇದವಾಙ್ಮಯಕ್ಕೂ ಹಿಂದಿನದೆಂದು ಹೇಳುತ್ತಾರೆ. ಆದರೆ ನಮಗೆ ಈಗ ಸಿಗುವ ಪುರಾಣಕೃತಿಗಳು ಸ್ವರೂಪತಃ ವೇದೋತ್ತರಕಾಲೀನ. ಇವು ವಿಶಿಷ್ಟಕೃತಿಗಳೆಂಬ ಸೂಚನೆಯನ್ನು ಛಾಂದೋಗ್ಯೋಪನಿಷತ್ತು ಕೊಟ್ಟಿದೆ. ಇವುಗಳ ಸ್ಪಷ್ಟೋಲ್ಲೇಖ ಸೂತ್ರವಾಙ್ಮಯದಲ್ಲಿದೆ.

ಹದಿನೆಂಟು ಪುರಾಣಗಳ ಹೆಸರನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಶ್ಲೋಕ ನೆರವಾಗುತ್ತದೆ:
ಮಧ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಂ ಅನಾಪಲಿಂಗಕೂಸ್ಕಾನಿ ಪುರಾಣಾನಿ ಪ್ರಚಕ್ಷ್ಯತ್ರೇ॥
ಅಂದರೆ ಮಕಾರಾದಿಯಾಗಿ ಎರಡು 1) ಮತ್ಸ್ಯ ಮತ್ತು 2) ಮಾರ್ಕಂಡೇಯ ಭಕಾರಾದಿಯಾಗಿ ಎರಡು- 3) ಭವಿಷ್ಯ ಮತ್ತು 4) ಭಾಗವತ; ಬ್ರಕಾರಾದಿಯಾಗಿ ಮೂರು- 5) ಬ್ರಹ್ಮಾಂಡ, 6) ಬ್ರಹ್ಮವೈವರ್ತ, ಮತ್ತು 7) ಬ್ರಾಹ್ಮ; ವಕಾರಾದಿಯಾಗಿ ನಾಲ್ಕು- 8) ವಾಮನ, 9) ವರಾಹ, 10) ವಿಷ್ಣು ಮತ್ತು 11) ವಾಯು; 13) ಅಗ್ನಿ, 13) ನಾರದ, 14) ಪದ್ಮ, 15) ಲಿಂಗ, 16) ಗರುಡ, 17) ಕೂರ್ಮ, 18) ಸ್ಕಂದ.

ಸಾಂಪ್ರದಾಯಿಕ ಗಣನೆಯ ಮೇರೆಗೆ ಬ್ರಾಹ್ಮ, ವೈಷ್ಣವ, ವಾಯವ್ಯ, ಭಾಗವತ, ನಾರದೀಯ, ಮಾರ್ಕಂಡೇಯ, ಆಗ್ನೇಯ, ಭವಿಷ್ಯ, ಬ್ರಹ್ಮವೈವರ್ತ, ಮತ್ಸ್ಯ, ವರಾಹ, ಲೈಂಗ, ಸ್ಕಾಂದ, ವಾಮನ, ಕೌರ್ಮ, ಗಾರುಡ ಮತ್ತು ಬ್ರಹ್ಮಾಂಡಗಳೆಂಬುವೇ 18 ಮಹಾಪುರಾಣಗಳು. ಈ ಪಟ್ಟಿಯಲ್ಲಿ ವಾಯವ್ಯಕ್ಕೆ ಬದಲಾಗಿ ದೇವೀಭಾಗವತವನ್ನೂ ಸೇರಿಸಿದ ಪಾಠಾಂತರಗಳಿವೆ. ಆದರಿವು ವಾಸ್ತವಿಕವಾಗಿ ಉಪಪುರಾಣಗಳು.

18 ಮುಖ್ಯ ಪುರಾಣಗಳು ಏನು ಹೇಳುತ್ತವೆ, ಯಾವ ಕಥನವನ್ನು ಒಳಗೊಂಡಿವೆ? ಇಂದಿನಿಂದ ಪ್ರತಿನಿತ್ಯ ಒಂದು ಪುರಾಣದ ಕುರಿತು ಬರೆಯುತ್ತೇನೆ… ಓದಿ…

ಬ್ರಹ್ಮ ಪುರಾಣ
ಅಷ್ಟಾದಶ ಮಹಾಪುರಾಣಗಳ ಎಲ್ಲ ಪಟ್ಟಿಗಳಲ್ಲೂ ಹತ್ತು ಸಾವಿರ ಶ್ಲೋಕಗಳುಳ್ಳವೆಂದು ಹೆಸರಾದರೂ ನಿಜವಾಗಿ ಸುಮಾರು 7-8 ಸಾವಿರ ಶ್ಲೋಕಗಳನ್ನಷ್ಟೇ ಉಳ್ಳ ಇದು ಆದಿಪುರಾಣವೆಂದು ಹೆಸರಾಗಿದೆ. ಉಪೋದ್ಘಾತದಲ್ಲಿ ಲೋಮಹರ್ಷಣ ಸೂತನ ನೈಮಿಷಾರಣ್ಯಕ್ಕೆ ಹೋದಾಗ ಅಲ್ಲಿದ್ದ ಋಷಿಗಳು ಪ್ರಪಂಚದ ಆದ್ಯಂತಗಳನ್ನು ವಿವರಿಸಲು ಕೇಳಿಕೊಳ್ಳಲಾಗಿ ಸೂತಪುರಾಣಿಕ ಮಾನವಕುಲದ ಮೂಲಪಿತಾಮಹರಲ್ಲಿ ಒಬ್ಬನಾದ ದಕ್ಷನಿಗೆ ಒಮ್ಮೆ ಸೃಷ್ಟಿಕರ್ತನಾದ ಬ್ರಹ್ಮ ಹೇಳಿದ ಬ್ರಹ್ಮಪುರಾಣವನ್ನು ಹೇಳಲು ಒಪ್ಪುತ್ತಾನೆ.

ಅವನ ಪುರಾಣ ಪ್ರವಚನದಲ್ಲಿ ಎಲ್ಲ ಪುರಾಣಗಳಿಗೂ ಹೆಚ್ಚು ಕಡಿಮೆ ಸಾಧಾರಣವೆನ್ನಿಸುವ ವಿಶ್ವಸೃಷ್ಟಿ, ಆದಿಮಾನವನಾದ ಮನು ಮತ್ತು ಅವನ ವಂಶಜರ ಹುಟ್ಟು, ದೇವತೆಗಳ ಉತ್ಪತ್ತಿ, ಗಂಧರ್ವಾದಿಗಳ ಉದಯ, ಸೂರ್ಯ, ಚಂದ್ರವಂಶಜರ ರಾಜ ಮಹಾರಾಜರ ಪೀಳಿಗೆಯ ವೃತ್ತಾಂತ, ಭೂವಿಭಾಗ, ಸ್ವರ್ಗ, ನರಕಗಳ ವಿವರ ಬರುತ್ತವೆ. ಪುರಾಣದ ಬಹ್ವಂಶ ತೀರ್ಥ ಮಾಹಾತ್ಮ್ಯವನ್ನು ಹೇಳುತ್ತದೆ. ಒರಿಸ್ಸದ ದೇವಾಲಯ ಮತ್ತು ಸುತ್ತಮುತ್ತಲಿನ ತೀರ್ಥಕ್ಷೇತ್ರಗಳು ಗಣ್ಯವಾಗಿ ವರ್ಣಿಸಲ್ಪಟ್ಟಿವೆ.

ಆದಿತ್ಯೋತ್ಪತ್ತಿ, ಶಿವಪ್ರಿಯವನ, ಉಮಾಜನನ, ಉಮಾವಿವಾಹ, ಶಿವಸ್ತೋತ್ರ, ಕಂಡುಮಹರ್ಷಿಯ ಸ್ತ್ರೀಲೋಲುಪತೆ, ವಿರಾಗ, ಕೃಷ್ಣಲೀಲೆ, ಶ್ರಾದ್ಧನಿಯಮ, ಧಾರ್ಮಿಕ ಜೀವನದ ನೀತಿ, ವರ್ಣಾಶ್ರಮ ಧರ್ಮ, ಸ್ವರ್ಗ, ನರಕ, ವಿಷ್ಣುಪುಜಾದಿಗಳು-ಇವು ಇದರ ಸಾರ. ಯುಗ, ಪ್ರಲಯ, ಸಾಂಖ್ಯಯೋಗ, ಮೋಕ್ಷೋಪಾಯಗಳ ವಿವೇಚನೆಯೂ ಕೊನೆಯಲ್ಲಿವೆ. ಪ್ರಸ್ತುತ ಪುರಾಣದಲ್ಲಿ ಅತ್ಯಲ್ಪಭಾಗ ಪ್ರಾಚೀನ; ತೀರ್ಥಮಾಹಾತ್ಮ್ಯವಂತೂ ಪ್ರ.ಶ. 13ನೆಯ ಶತಮಾನಕ್ಕಿಂತ ಹಿಂದಿನದೆನ್ನಿಸದು.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣDr Gururaj PoshettihalliHindu MythologyKannadaNewsWebsiteLord Brahmaಇತಿಹಾಸಡಾ.ಗುರುರಾಜ ಪೋಶೆಟ್ಟಿಹಳ್ಳಿಪ್ರವಚನಬ್ರಹ್ಮ ಪುರಾಣ
Share197Tweet123Send
Previous Post

ಕೊರೋನಾ ಲಾಕ್’ಡೌನ್: ತುತ್ತು ಅನ್ನಕ್ಕೂ ನಿರ್ಗತಿಕರ ಪರದಾಟ..! ಮಾನವೀಯತೆ ಮೆರೆದ ಯುವಕರು

Next Post

ಜೀವ ಲೆಕ್ಕಿಸದೇ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರೆ ಪುತ್ತೂರು ಕೆದಿಲ ಗಡಿಯಾರ ಗ್ರಾಮದ ಕೆಲ ಯುವಕ ವಿಕೃತಿ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೀವ ಲೆಕ್ಕಿಸದೇ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರೆ ಪುತ್ತೂರು ಕೆದಿಲ ಗಡಿಯಾರ ಗ್ರಾಮದ ಕೆಲ ಯುವಕ ವಿಕೃತಿ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಹುದ್ದೆಗಳು: ಲಿಂಕ್ಡ್‌ ಇನ್

April 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL