ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವವೇ ಕೊರೋನಾ ಸಾಂಕ್ರಾಮಿಕ ರೋಗದ ಭೀತಿಯಿಂದ ತಲ್ಲಣಗೊಂಡು ಕಟ್ಟಡ ಕೂಲಿ ಕಾರ್ಮಿಕರು, ಸ್ಲಂ ನಿವಾಸಿಗಳು ಕೆಲಸವಿಲ್ಲದೆ ಪರಿತಪಿಸುವಂತಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಸರಕಾರಗಳೆ ಸಾವಿರ ರೂ. ನೀಡಬೇಕೆಂದು ಸೋಮವಾರ ಸಂಯುಕ್ತ ಜನತಾದಳದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಸರ್ಕಾರವನ್ನು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಸುಮಾರು 6 ಸಾವಿರ ಕಟ್ಟಡ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲವರು ಮಾತ್ರ ಆನ್’ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ಬ್ಯಾಂಕಿನ ಮೂಲಕ ಭತ್ಯೆ ಪಡೆಯುತ್ತಿರುತ್ತಾರೆ. ಸುಮಾರು ಎರಡುವರೆ ಸಾವಿರ ಕಾರ್ಮಿಕರು ಬ್ಯಾಂಕ್ ಖಾತೆಯ ಸಂಖ್ಯೆ ನೀಡದೆ ವಂಚಿತರಾಗಿದ್ದಾರೆ. ಕೂಡಲೆ ಇವರನ್ನು ಪರಿಗಣನೆಗೆ ತೆಗೆದುಕೊಂಡು ಮಾಸಿಕ ಒಂದು ಸಾವಿರ ರೂ ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರ್ ಸೋಮಶೇಖರ್ ರವರಿಗೆ ನೀಡಿರುವ ಮನವಿಯಲ್ಲಿ ಶಶಿಕುಮಾರ್ ಗೌಡ ಸರ್ಕಾರಕ್ಕೆ ಒತ್ತಾಯಿಸಿದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Get in Touch With Us info@kalpa.news Whatsapp: 9481252093
Discussion about this post