ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಣ ತುರ್ತು ಪರಿಸ್ಥಿತಿ ಇದ್ದು ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣು ತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ರಾಜ್ಯದಲ್ಲಿ ಜನತೆಗೆ ಲಾಕ್‌ಡೌನ್ ನಿಂದ ಅಗತ್ಯ ವಸ್ತುಗಳ ಪೂರೈಕೆಗಾಗಲೀ ಖರೀದಿಗಾಗಲಿ ಕೊರತೆಯಾಗದಂತೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಅಲ್ಲದೇ ಹಣ್ಣು ತರಕಾರಿಗಳ ಕೊರತೆಯಾಗದಂತೆ ನೇರ ಮಾರುಕಟ್ಟೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಮೇಯರ್ ಕೊಠಡಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ನಗರದ ನಾಗರಿಕರಿಗೆ ಅತ್ಯವಶ್ಯಕ ಹಣ್ಣು ತರಕಾರಿ ಸರಬರಾಜಿಗೆ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.
(ವರದಿ: ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)
Get in Touch With Us info@kalpa.news Whatsapp: 9481252093

















