ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ವಿರುದ್ಧ ಹೋರಾಟದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಎಪ್ರಿಲ್ 5ರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆರಿಸಿ, ಎಣ್ಣೆ ದೀಪ ಬೆಳಗಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ವೀಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಕೊರೋನಾ ಭೀತಿಯಿಂದ ಜಗತ್ತು ಇಂದು ತತ್ತರಿಸುತ್ತಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಕಾರಾತ್ಮಕ ಕೆಲಸ ಮಾಡುವ ಅಗತ್ಯವಿದೆ ಎಂದರು.
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಕೆ.ಕೆ. ಅಗರವಾಲ್ ಅವರು ಅಭಿಪ್ರಾಯ ಪಟ್ಟಿರುವಂತೆ ಈ ರೀತಿಯ ಪ್ರಾರ್ಥನೆಯ ಸಕಾರಾತ್ಮಕ ಕಾರ್ಯವೊಂದು ಸಂಕಷ್ಟದ ಸಮಯದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ಮಾಡಲಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲರೂ ನಾಳೆ ರಾತ್ರಿ 9 ಗಂಟೆಯಿಂದ 9 ನಿಮಿಷಗಳ ಕಾಲ ಮಾತ್ರ ದೀಪ ಬೆಳಗಿಸಿ, ಪ್ರಾರ್ಥನೆ ಮಾಡೋಣ ಎಂದು ಕರೆ ನೀಡಿದ್ದಾರೆ.
Get in Touch With Us info@kalpa.news Whatsapp: 9481252093
















