ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಹಾಗೂ ಕುಮಾರಸ್ವಾಮಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿಎಂ, ಎಲ್ಲಾ ಶಾಸಕರ, ಪ್ರತಿಪಕ್ಷದ ನಾಯಕರ, ಪರಿಷತ್ ಸದಸ್ಯರ ವೇತನ ಕಡಿತ ಮಾಡೋ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಶೇ. 30 ರಷ್ಟು ಸಂಬಳ ಕಡಿತ ಮಾಡೋ ಬಗ್ಗೆ ಮಾತುಕತೆ ನಡೆದಿದ್ದು, ಕೊರೊನಾ ಹಿನ್ನಲೆ ಸರ್ಕಾರಕ್ಕೆ ಆರ್ಥಿಕ ತೊಂದರೆಯಾಗುತ್ತಿದೆ. ಸರ್ಕಾರಕ್ಕೆ ಬರಬೇಕಾದ ತೆರಿಗೆ ಸಂಪೂರ್ಣ ನಿಂತಿದೆ. ಹೀಗಾಗಿ ಕೇವಲ ಜನಪ್ರತಿನಿಧಿಗಳ ವೇತನ ಕಡಿತದ ಬಗ್ಗೆ ಸಿಎಂ ಚರ್ಚಿಸಿದ್ದಾರೆ. ಇದಕ್ಕೆ ಪ್ರತಿಪಕ್ಷದ ನಾಯಕರು ಸಹ ಸಮ್ಮತಿ ಸೂಚಿಸಿದ್ದು, ಈ ಹಿನ್ನಲೆಯಲ್ಲಿ ವೇತನ ಕಡಿತದ ಬಗ್ಗೆ ಸರ್ಕಾರ ನಿರ್ಧರಿಸಿದೆ.
ಆದರೆ ಯಾವುದೇ ಕಾರಣಕ್ಕೂ ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರ ವೇತನ ಕಡಿತವಿಲ್ಲ ಎಂಬುದನ್ನೂ ಸಹ ಸರ್ಕಾರ ತಿಳಿಸಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093

















