ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ನಗರದ ಬಡ ಜನರ ಸಹಾಯಕ್ಕಾಗಿ ಮಹಾನಗರ ಪಾಲಿಕೆ ಹಗಲಿರುಳು ಶ್ರಮಿಸುತ್ತಿದ್ದು, ಬಡ ಜನರಿಗಾಗಿ ಉಚಿತವಾಗಿ ಆಹಾರ ವಿತರಣೆ ಮಾಡಿದೆ.
ಆಯ್ದ ಬಡಾವಣೆಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಗಿದೆ.
ಮಹಾನಗರ ಪಾಲಿಕೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಸ್ವೀಕರಿಸುತ್ತಿದ್ದು, ಇದನ್ನು ಸದುಪಯೋಗ ಮಾಡುತ್ತಿದೆ.
Get in Touch With Us info@kalpa.news Whatsapp: 9481252093















