No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2020
in Small Bytes, ಕೊಪ್ಪಳ
0
ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ನಾಳೆಯಿಂದ ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ – ರಸಗೊಬ್ಬರಗಳ ವಿತರಣೆ ನಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಾವು ಬೆಳೆಹಾನಿ ಪರಿಶೀಲಿಸಿದ್ದು ಸುಮಾರು 75 ಸಾವಿರ ಎಕರೆಯಷ್ಟು ಭತ್ತದ ಬೆಳೆ ನಾಶವಾಗಿದೆ. ವಿಶೇಷ ಟಾಸ್ಕ್‌ ಪೋರ್ಸ್ ರಚನೆ ಮಾಡಿ ಎರಡು ದಿನಗಳ ಒಳಗೆ ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ನಂತರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಗಂಗಾವತಿ, ಕಾರಟಗಿಗಳಲ್ಲಿ ರೈತರು ಬೆಳೆಗಳ ಸ್ಯಾಂಪಲನ್ನು  ತೆಗೆದುಕೊಂಡು ಹೋಗುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ.

ರೈತರು ತಮಗೆ ಸೂಕ್ತವೆನ್ನಿಸಿದ ಕಡೆ ತಾವು ಬೆಳೆದ ಬೆಳೆಯ ಫಸಲಿನ ಸ್ಯಾಂಪಲ್ ತೆಗೆದುಕೊಂಡು ಹೋಗಿ ಕೊಡಬಹುದು. ಇತರರು ತಾವಾಗೇ ಬಂದು ಸ್ಯಾಂಪಲ್ ಸಂಗ್ರಹಣೆ ಮಾಡಬಾರದು.ರೈತರು ಮಾರುಕಟ್ಟೆಗಳಿಗೆ ಹೋಗುವಾಗ ಪೊಲೀಸರು ತೊಂದರೆ ಕೊಡಬಾರದು. ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಮಾರುಕಟ್ಟೆಗಳಿಗಾಗಲೀ ಕೇಂದ್ರಗಳಿಂದಾಗಲೀ ಕಳಪೆ ಬೀಜ, ಗೊಬ್ಬರ ಪೂರೈಕೆಯಾಗಿರುವುದು ಕಂಡುಬಂದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಪೊಲೀಸರು ನಿಗಾವಹಿಸಬೇಕು ಹಾಗೂ ಇಲಾಖೆಯಿಂದ ವಿಝಲೆನ್ಸ್‌ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇಂತಹ ಅಪರಾಧದ ಹಿಂದೆ ಯಾರೇ ಇರಲಿ ಎಷ್ಟೇ ದೊಡ್ಡವರಿರಲಿ ಯಾರಿಗೂ ಸೊಪ್ಪು ಹಾಕುವುದಿಲ್ಲ, ಸುಮ್ಮನೆ ಬಿಡುವುದಿಲ್ಲ ಎಂದು ಪುನರ್ ಎಚ್ಚರಿಸಿದರು.

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಕೊಡಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸ್ಪಷ್ಟ ಸುತ್ತೋಲೆಯೇ ಇದೆ. ರೈತರ ಪರಿಕರ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಲಾಕ್ ಡೌನ್ ತೆರವಾಗಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಗೂ ಮುನ್ನ ಸಭೆ
ಕೊರೋನಾ ನಿರ್ಬಂಧಿತ ಅವಧಿಯಲ್ಲಿ ಕೃಷಿ ಇಲಾಖೆಗಳ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ರೈತರ ಸ್ಥಿತಿಗತಿ ಕುರಿತು ಇಲ್ಲಿನ್ ಜಿಲ್ಲಾ ಸಭಾಂಗಣದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಆಗದಂತೆ ಅಂತಾರಾಜ್ಯಗಳಿಂದ ರಸಗೊಬ್ಬರ ತರುವ ಸಾಗಣಿಕೆದಾರರಿಗೆ ಗ್ರೀನ್ ಪಾಸ್ ವಿತರಿಸಬೇಕು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಆಗ ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಮಾತನಾಡಿ ಮುಂಗಾರು ಹಂಗಾಮಿನಲ್ಲಿ 2.5 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶವಿದ್ದು, ಬೀಜ ಪರಿವರ್ತನೆ ಆಧಾರದ ಮೇಲೆ 30 ಸಾವಿರ ಕ್ವಿಂಟಲ್ ಬೀಜಗಳ ಅಗತ್ಯತೆಯಿದೆ. ಬೇಡಿಕೆ ಅನುಗುಣವಾಗಿ ಬೀಜಗಳ ದಾಸ್ತಾನು ಮಾಡಿದ್ದು ಬೀಜಗಳ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ವಿಶೇಷವಾಗಿ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಸಿಂಗನಾಳ್ ಕ್ಯಾಂಪ್, ಹಣವಾಳ ಹಾಗೂ ಜಿರಾಳ ಕಲ್ಲುಗುಡಿ ಗ್ರಾಮಗಳಲ್ಲಿ ಎ.7 ರಂದು ಸುರಿದ ಅಕಾಲಿಕ ಗಾಳಿಮಳೆಹೆ ಸುಮಾರು 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೇ ಗಾಳಿ ಹಾಗೂ ಆಣೆಕಲ್ಲು ಮಳೆಯ ಹೊಡೆತದಿಂದ ಭತ್ತ ಮಾಗುವ ಮೊದಲೇ ಮೊಳಕೆ ಒಡೆಯುವ ಸಂಭವವಿರುತ್ತದೆ. ಈ ಬಗ್ಗೆ ನಿಗಾವಹಿಸಲು ಅಧಿಕಾರಿಗಳ ಗಮನಕ್ಕೆ ತರಲಾಯಿತು.  ಜಿಲ್ಲೆಯ ಕೃಷಿ ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ಲೆಕ್ಕ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಎಪಿಎಂಸಿ ಮಾರುಕಟ್ಟೆಗಳು ಪ್ರಾರಂಭವಾಗದಿರುವುದನ್ನು ಗಮನಿಸಿ, ಸರ್ಕಾರದ ಸೂಚನೆಯಂತೆ ತಕ್ಷಣವೇ ವ್ಯಾಪಾರಸ್ಥ ಹಾಗೂ ಖರೀದಿದಾರರ ಯಾದಿಯನ್ನು ತಯಾರಿಸಿ ಅವರಿಗೆ ಪಾಸ್ ನೀಡಿ ಸಮಾಜಿಕ ಅಂತರ ಕಾಯ್ದುಕೊಂಡು ಕೂಡಲೇ ಎಂಪಿಎಂಸಿ ಮಾರುಕಟ್ಟೆ ಪ್ರಾರಂಭಿಸಬೇಕು. ಈ ಸಾಲಿನಲ್ಲಿ ಹಿಂಗಾರು ಬೆಳೆಗಳು ಅದರಲ್ಲೂ ವಿಶೇಷವಾಗಿ ಜೋಳ, ಕಡಲೆ, ಶೇಂಗಾ ಬೆಳೆಗಳ ಇಳುವರಿ ಚೆನ್ನಾಗಿ ಬಂದಿದ್ದು ಕೊರೋನಾ ನಿರ್ಬಂಧಿತ ಅವಧಿಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ  ಖರೀದಿಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಕೃಷಿ ಚಟುವಟಿಕೆ ಗಳು ನಿಲ್ಲಬಾರದೆಂದು ಸರ್ಕಾರವು ಹೊರಡಿಸಿದ ಸುತ್ತೊಲೆಯಂತೆ ತಕ್ಷಣವೇ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು. ಈಗಾಗಲೇ ಖರೀದಿಸಿದ ರೈತರಿಗೆ ತಕ್ಷಣವೇ ಹಣ ಪಾವತಿಸಬೇಕು ಎಂದರು.

ಕೊರೋನಾ ನಿರ್ಬಂಧಿತ ಅವಧಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್  ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಹಾಕಿದ ಹಣವನ್ನು ರೈತರ ಅನುಮತಿ ಇಲ್ಲದೆ ಅವರ ಸಾಲದ ಮರುಪಾವತಿಗೆ  ಹೊಂದಿಸಿಕೊಳ್ಳುತ್ತಿರುವುದು ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭ ಆಗಿದ್ದು ಸಾಗಾಣಿಕಾ ನಿರ್ಬಂಧ ಇರುವುದರಿಂದ ಕಟಾವು ಯಂತ್ರದವರು ದುಪ್ಪಟ್ಟು ದರ ಕೇಳುತ್ತಿರುವುದರ್ ವಿರುದ್ಧ ಗಮನಹರಿಸಬೇಕು. ಮುಂದೆ ಈ ರೀತಿ ಆಗಬಾರದು ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ  ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿಗೆ ಬಂದ ರೈತರಿಗೆ ಅಧಿಕಾರಿಗಳು ಹೊಲದ ಪಹಣಿಯ ಪ್ರತಿ ಕೇಳುತ್ತಿರುವುದನ್ನು ಗಮನಿಸಿದ ಕೃಷಿ ಸಚಿವರು, ಕೊರೊನಾ ನಿರ್ಬಂಧಿತ ಅವಧಿಯಲ್ಲಿ ಜೆರಾಕ್ಸ್‌ ಯಂತ್ರಗಳ ಅಂಗಡಿ ತೆರೆಯದ ಕಾರಣ ಪಹಣಿ ಪತ್ರದ ಜೆರಾಕ್ಸ್‌ ಪ್ರತಿ ಕೊಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತನ ಸರ್ವೆ ನಂಬರ್ ಹಾಗೂ ಆಧಾರ ಕಾರ್ಡ್ ನಂಬರ್ ಅನ್ನು ನಮೂದಿಸಿಕೊಂಡು ಆನ್’ಸೈನ್ ಮೂಲಕ ಪರೀಶಿಲಿಸಿ ಖಚಿತ ಪಡಿಸಿಕೊಂಡು ಬೀಜ ವಿತರಣೆ ಮಾಡುವಂತೆ ಜಂಟಿ ನಿರ್ದೇಶಕರಿಗೆ ಸಚಿವರು ಸಲಹೆ ನೀಡಿದರು.

ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಫ್ ಕಾಮ್ಸ್, ರೈತ ಉತ್ಪಾದಕರ ಸಂಘಗಳ ಮೂಲಕ ತರಕಾರಿ ಹಾಗೂ ಹಣ್ಣು ಖರೀದಿಸಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆಯನ್ನು ಹೆಚ್ಚಿಸಬೇಕು. ಜಿಲ್ಲೆಯ ಪಶುಸಂಗೋಪನಾ ಅಧಿಕಾರಿಗಳು ಕೋಳಿ ಫಾರಂಗಳಿಗೆ ಭೇಟಿ ನೀಡಿ ಸ್ವಚ್ಛತೆಯೆಡೆಗೆ ಗಮನ ಹರಿಸಬೇಕು ಎಂದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾ ಸಂಸದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ್ಯ, ರಾಘವೇಂದ್ರ ಹಿಟ್ನಾಳ್, ಬಸವರಾಜ್ ದಡೆಸೂಗುರು  ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಹಾಗೂ  ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)

Get in Touch With Us info@kalpa.news Whatsapp: 9481252093

Tags: KannadaNewsWebsiteKoppalLatestNewsKannadaMinister B C Patilಕೊಪ್ಪಳಬಿತ್ತನೆ ಬೀಜರಸಗೊಬ್ಬರರೈತ ಸಂಪರ್ಕ ಕೇಂದ್ರಸಚಿವ ಬಿ.ಸಿ. ಪಾಟೀಲ್
Share197Tweet123Send
Previous Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

Next Post

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL