ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕರಾಗಿರುವ ಬಿ.ಸಿ. ಪಾಟೀಲ್ ನೇತೃತ್ವದಲ್ಲಿ ಉಚಿತ ಮಾಸ್ಕ್’ಗಳನ್ನು ವಿತರಿಸಲಾಯಿತು.
ಸಚಿವ ಬಿ.ಸಿ. ಪಾಟೀಲ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್‌ನಂತೆ ದುಡಿಯುತ್ತಿದ್ದು, ಮನೆಮನೆಗೆ ಹೋಗಿ ಜನರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ. ವಿವರ ಕೇಳಲು ಬರುವ ಆಶಾಕಾರ್ಯಕರ್ತೆಯರಿಗೆ ಪ್ರತಿಯೊಬ್ಬರು ಸಹಕರಿಸಬೇಕು. ಗ್ರಾಮಪಂಚಾಯಿತಿ ಕಡೆಯಿಂದ ಆಶಾಕಾರ್ಯಕರ್ತೆಯರಿಗೆ ಥರ್ಮೋಮೀಟರ್ ಒದಗಿಸಿದಲ್ಲಿ ಜನರ ಆರೋಗ್ಯ ತಪಾಸಣೆಗೆ ಸಹಕಾರವಾಗಲಿದೆ ಎಂದರು.
ಜನರು ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಲಾಕ್ಡೌನ್ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಗಳನ್ನು ಉಲ್ಲಂಘಿಸಬಾರದು. ಯಾರಿಗಾದರೂ ಅನಾರೋಗ್ಯದ ಲಕ್ಷಣ ಕಂಡುಬಂದಲ್ಲಿ ಅದನ್ನು ತಕ್ಷಣವೇ ತಾಲೂಕು ವೈದ್ಯಾಧಿಕಾರಿ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸಚಿವರು ಸಲಹೆ ನೀಡಿದರು.
ಬಳಿಕ ಹಿರೇಕೆರೂರಿನ ವ್ಯವಸಾಯೋತ್ಪನ್ನ ಸಹಕಾರಿ ಮಾರಾಟ ಸಂಘ(ಲಿ) ಇಲ್ಲಿಗೆ ಭೇಟಿ ನೀಡಿದ ಸಚಿವರು, ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯವಾದ ಗೊಬ್ಬರ, ಬೀಜದ ದಾಸ್ತಾನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ್, ಎಸ್.ಎಸ್.ಪಾಟೀಲ್, ರವಿಶಂಕರ್ ಬಾಳಿಕಾಯಿ, ಪಿಎಸ್‌ಐ ಸಿಪಿಐ ತಹಶೀಲ್ದಾರ್ ಹಾಜರಿದ್ದರು.
(ವರದಿ: ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)
Get in Touch With Us info@kalpa.news Whatsapp: 9481252093
Discussion about this post