ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ವಾರಿಯರಸ್ ಮೇಲೆ ನಿನ್ನೆ ನಡೆದ ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿ ಹಲ್ಲೆ ನಡೆಸುವ ಪ್ರಯತ್ನ ಮಾಡಲಾಗಿದೆ. ಘಟನೆಯ ಕೆಲವೇ ಗಂಟೆಯಲ್ಲಿ 54 ಜನರನ್ನು ಬಂಧಿಸಲಾಗಿದೆ. ಮತ್ತಷ್ಟು ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಬಂಧಿತರ ವಿರುದ್ದ ಎನ್’ಡಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದರು.
ಘಟನೆ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಸೆಕೆಂಡರಿ ಕಾಂಟ್ಯಾಕ್ಟ್ ಇರುವ ಜನ ಸ್ವಯಂ ಪ್ರೇರಿತವಾಗಿ ಕ್ವಾರಂಟೈನ್ ಗೆ ಸಹಕಾರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಾದರಾಯನಪುರದಲ್ಲಿ ಅಧಿಕಾರಿಗಳ ಮೇಲೆ ಗೊಂಡಾಗಿರಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಶ್ರೀ @BSYBJP ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. #ಮನೆಯಲ್ಲೇಇರಿ#KarnatakaFightsCorona pic.twitter.com/DixvvD8tzl
— CM of Karnataka (@CMofKarnataka) April 20, 2020
ಕೋವಿಡ್ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ. ಜನತೆ ಸರ್ಕಾರದ ಜತೆ ಸಹಕರಿಸಬೇಕು. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಮಸ್ಯೆ ಮಾಡಿದರೆ ಕಠೋರ ಕ್ರಮ ಜರುಗಿಸಲಾಗುವುದು.
ಪಾದರಾಯನಪುರದ ಹಿಂದೆ ಕೆಎಫ್’ಡಿಯ ಕೆಲವು ಪುಡಿ ನಾಯಕರು ಗಲಭೆಗೆ ಪ್ರಚೋದನೆ ನೀಡಿದ್ದು ಇಂತಹವರಿಗೆ ಪೊಲೀಸ್ ಆಕ್ಷನ್ ಏನೆಂಬುದನ್ನು ತೋರಿಸುತ್ತೇವೆ. ಪುಂಡಾಟಿಕೆ ಮಾಡುವವರನ್ನು ಮುಲಾಜಿಲ್ಲದೆ ಅಡಗಿಸುತ್ತೇವೆ ಎಂದಿದ್ದಾರೆ.
ಕೊರೊನಾ ತಡೆಯುವ ನಿಟ್ಟಿನಲ್ಲಿ ಯಾವಾಗಾ ಏನು ಕ್ರಮ ಕೈಗೊಳ್ಳಬೇಕಿದೆ. ಶಾಸಕ ಜಮೀರ್ ಅಹ್ಮದ್ ಏನೇ ಹೇಳಿಕೆ ನೀಡಿದರೂ ಅವರು ಸರ್ಕಾರವಲ್ಲ. ಯಾರು ಯಾವಾಗ ಹೇಗೆ ನಡೆದುಕೊಳ್ಳಬೇಕು ಎಂಬುದು ಅಧಿಕಾರಿಗಳಿಗೆ ತಿಳಿದಿದೆ. ನಾವು ಇಂತಹ ಪುಂಡರನ್ನು ಮಟ್ಟ ಹಾಕದೆ ಬಿಡುವುದಿಲ್ಲ ಎಂದಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post