ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ಕೊರೋನಾ ವಾರಿಯರ್ಸ್ ಮೇಲೆ ಮುಸಲ್ಮಾನರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅವರನ್ನು ಯಾಕೆ ಕೇಳಬೇಕು? ಯಾರು ಅವರು? ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. 54 ಜನರನ್ನು ಇದುವರೆಗೆ ಬಂಧಿಸಲಾಗಿದೆ. ಶೀಘ್ರದಲ್ಲೇ ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದರು.
ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. ಅವರ ಹೇಳಿಕೆ ನೋಡಿದರೆ ಇಂತಹ ಗಲಭೆಗೆ ಅವರೇ ಪ್ರಚೋದನೆ ನೀಡುತ್ತಿದ್ದಾರೆಂದು ಭಾವಿಸಬೇಕೆ? ರಾಜ್ಯದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಈ ರೀತಿಯ ಗೂಂಡಾ ಪ್ರವೃತ್ತಿ ಸಹಿಸುವ ಪ್ರಶ್ನೆ ಇಲ್ಲ. ಇದರಲ್ಲಿ ಯಾವ ಧರ್ಮ, ಜಾತಿಯ ಪ್ರಶ್ನೆಯಿಲ್ಲ. ಗೂಂಡಾಗಿರಿ ಮಾಡುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post