ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂ ಬಿಶ್ತ್ ಅವರು ಇಂದು ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನವದೆಹಲಿಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಅವರು ಇಹಲೋಕ ತ್ಯಜಿಸಿದ್ದಾರೆ.
ಇನ್ನು, ಕೊರೋನಾ ವೈರಸ್ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಮ್ಮ ತಂದೆಯವರು ಅಂತ್ಯಕ್ರಿಯೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ ಎಂದು ಸಿಎಂ ಯೋಗಿ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಲಾಕ್ ಡೌನ್ ನಿಯಮ ಪಾಲಿಸುವುದು ನಮ್ಮೆಲ್ಲರ ಕರ್ತವ್ಯ. ಅಲ್ಲದೇ, ಉತ್ತರ ಪ್ರದೇಶ ಜನರ ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ. ಹೀಗಾಗಿ, ನಾನು ಹೋಗುತ್ತಿಲ್ಲ. ಲಾಕ್ ಡೌನ್ ಮುಕ್ತಾಯವಾದ ನಂತರ ಮನೆಗೆ ತೆರಳುತ್ತೇನೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post