ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ವೈರಸ್ ಪಾಸಿಟವ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ 47 ವರ್ಷದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಎ.21ರಂದು ಮೃತಪಟ್ಟಿದ್ದ ಕೇಸ್ ನಂಬರ್ 432 ವೃದ್ದೆಯ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ತಿಳಿದುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ವೃದ್ದೆಯ ಸಂಪರ್ಕದಿಂದ ಸ್ವೀಪರ್ ಕೆಲಸ ಮಾಡುತ್ತಿದ್ದ ಈ ಮಹಿಳೆಗೆ ಸೋಂಕು ತಗುಲಿದ್ದು, ವೃದ್ದೆ ಮೃತಪಟ್ಟ ತಕ್ಷಣ ಆಸ್ಪತ್ರೆ ಸಿಬ್ಬಂದಿಯನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
Get in Touch With Us info@kalpa.news Whatsapp: 9481252093














