ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 17ರವರೆಗೂ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಗೃಹ ಇಲಾಖೆ, ಮೇ 3ರ ನಂತರವೂ ಸಹ ಎರಡು ವಾರಗಳ ಕಾಲ ಲಾಕ್ ಡೌನ್ ಮುಂದುವರೆಸಿದ್ದು, ರೆಡ್ ಝೋನ್’ನಲ್ಲಿರುವ 130 ಜಿಲ್ಲೆಗಳಲ್ಲಿ ಯಥಾಸ್ಥಿತಿಯನ್ನು ಕಾಪಾಡುವಂತೆ ಸೂಚಿಸಿದೆ.
ಅಗತ್ಯ ವಸ್ತುಗಳ ಸರಬರಾಜು ಹಾಗೂ ಖರೀದಿಗೆ ಷರತ್ತುಬದ್ದ ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಇನ್ನುಳಿದಂತೆ ಯಾವುದೇ ವ್ಯವಹಾರ ನಡೆಸದಂತೆ ಸೂಚಿಸಿದೆ.
Get in Touch With Us info@kalpa.news Whatsapp: 9481252093

















