ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸುರತ್ಕಲ್: ಎಂಆರ್ ಪಿಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಅರಣ್ಯಕ್ಕೆ ಸಾಗಿಸಿದ್ದಾರೆ.
ಕುತ್ತೆತ್ತೂರು ಬಾಜಾವಿನಲ್ಲಿ ಸ್ಥಳೀಯರು ಹಂದಿಗೆ ಇಟ್ಟ ಉರುಳಿನಲ್ಲಿ ಸಿಲುಕಿಕೊಂಡ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.
ಮೂರ್ನಾಲ್ಕು ದಿನಗಳಿಂದ ಸುರತ್ಕಲ್ ಹಾಗೂ ಎಂಆರ್‌ಪಿಎಲ್ ಪರಿಸರದಲ್ಲಿ ಈ ಚಿರತೆ ಓಡಾಡುತ್ತಿದ್ದು ನಾಗರಿಕರಲ್ಲಿ ಆತಂಕ ಸೃಷ್ಟಿಸಿತ್ತು.
ಇಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಕಂಡುಬಂದ ಕಾಡುಕೋಣವೊಂದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಸಾಗಿಸಲಾಗಿದೆ.
Get in Touch With Us info@kalpa.news Whatsapp: 9481252093

















