No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2020
in ರಾಷ್ಟ್ರೀಯ
0
ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ಧಾವಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದಕ್ಕಾಗಿ 1610 ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸಿದೆ.

ಈ ಕುರಿತಂತೆ ಘೋಷಣೆ ಮಾಡಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೂವು ಬೆಳೆಗಾರರಿಗೆ ಹೆಕ್ಟೇರ್’ಗೆ ಸೀಮಿತವಾಗಿ 25 ಸಾವಿರ ರೂ ಪರಿಹಾರ. 11,687 ಹೆಕ್ಟೇರ್ ಪ್ರದೇಶದಲ್ಲಿ ಹೂವು ಬೆಳೆಯಲಾಗಿದೆ. ಅಗಸರು ಹಾಗೂ ಕ್ಷೌರಿಕರಿಗೆ ತಲಾ 5 ಸಾವಿರ ರೂ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2 ಲಕ್ಷದ 30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ. ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.

ತರಕಾರಿ ಹಾಗೂ ಹಣ್ಣು ಬೆಳೆಗಾರರು ಸಂಕಷ್ಟದಲ್ಲಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಲಾಗುವುದು. ನೇಕಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 54 ಸಾವಿರ ನೇಕಾರರಿಗೆ ವರ್ಷಕ್ಕೆ 2 ಸಾವಿರ ರೂ ನೆರವು ನೀಡಲಾಗುವುದು ಎಂದರು.

ರಾಜ್ಯದಲ್ಲಿ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ಈ ಪೈಕಿ 11.80 ಲಕ್ಷ ಕಾರ್ಮಿಕರಿಗೆ 2 ಸಾವಿರ ರೂ ಪರಿಹಾರ ನೀಡಲಾಗಿದೆ. ಇದೀಗ ಹೆಚ್ಚುವರಿಯಾಗಿ 3 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.

ಕೋವಿಡ್19 ಪರಿಹಾರ ಘೋಷಣೆಗಳು ಇಂತಿವೆ:

  1. ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.
  2. ಲಾಕ್ ಡೌನ್’ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ. ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000/- ರೂ.ಗಳಂತೆ ಪರಿಹಾರವನ್ನು ಘೋಷಿಸಿದೆ.
  3. ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣುಗಳು ಇಳುವರಿಯು ಉತ್ತಮವಾಗಿದೆ. ಆದರೆ ಕೋವಿಡ್ 19 ರಿಂದ ಆಗಿರುವ ರಾಷ್ಟ್ರದಾದ್ಯಂತ ಲಾಕ್ ಡೌನ್ ನಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ದರಗಳನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ. ನಷ್ಟಕ್ಕೆ ಒಳಗಾಗಿರುವ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗುವುದು.
  4. ಕೋವಿಡ್ 19 ರಿಂದಾಗಿ ರೈತರಷ್ಟೇ ಅಲ್ಲದೆ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬನ್ನು ನಡೆಸಲಾಗಿದೇ ತಮ್ಮ ದೈನಂದಿನ ಆದಾಯವನ್ನು ಕಳೆದುಕೊಂಡಿರುತ್ತಾರೆ. ಇವರಿಗೆ ನೆರವಾಗಲು ನಮ್ಮ ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 230000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ 5000 ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು.
  5. ಹಾಗೆಯೇ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ತಮ್ಮ ಆದಾಯವನ್ನು ಕಳೆದುಕೊಂಡಿರುತ್ತಾರೆ. ನಮ್ಮ ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂ.ಗಳನ್ನು ನೀಡಲಾಗಿದೆ.
  6. ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗಿದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್‌್ಡ ಚಾರ್ಜನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು.
  7. ಹಾಗೆಯೇ ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಇಲ್ಲಿನ ಫಿಕ್ಸ್‌್ಡ ಚಾರ್ಜ್‌ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗುವುದು.
  8. ಎಲ್ಲ ಪ್ರವರ್ಗದ ಗ್ರಾಹಕರುಗಳಿಗೆ ವಿದ್ಯುಚ್ಚಕ್ತಿ ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು/ಪರಿಹಾರಗಳನ್ನು ಒದಗಿಸುವುದು.
  9. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿತಿಯನ್ನು ನೀಡುವುದು.
  10. ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯನ್ನು ಕಡಿಮೆಗೊಳಿಸಲಾಗುವುದು.
  11. ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹಧನ ನೀಡಲಾಗುವುದು.
  12. ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ/ಭಾಗವಾಗಿ ಪಾವತಿಸಲು ಅವಕಾಶ ಕಲ್ಪಿಸಲಾಗುವುದು.
  13. ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ 30.06.2020 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರುವುದು.
  14. ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ನೇಕಾರರಿಗೆ ಈ ಲಾಕ್ ಡೌನ್ ನಿಂದಾಗಿ ಮತ್ತಷ್ಟು ನಷ್ಟ ಉಂಟಾಗಿದೆ ನನ್ನ ಸರ್ಕಾರವು
  15. ಈಗಾಗಲೇ ನೇಕಾರರಿಗೆ ನೆರವಾಗಲು 109 ಕೋಟಿ ರೂ.ಗಳ ವೆಚ್ಚದಲ್ಲಿ ನೇಕಾರರ ಸಾಲ ಮನ್ನಾ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಗೆ ಈಗಾಗಲೇ ಹಿಂದಿನ ವರ್ಷ 29 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 80 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ನೇಕಾರರಿಗೆ ಹೊಸ ಸಾಲಗಳು ದೊರಕಿಸಿಕೊಡಲು ನಾನು ಮಾಡಿಕೊಡಲಾಗುತ್ತದೆ. ಮುಂದುವರೆದು ಜನವರಿ 01 2019 ರಿಂದ ಮಾರ್ಚ್ 31, 2019 ರ ಅವಧಿಯೊಳಗೆ 1 ಲಕ್ಷ ರೂ. ಒಳಗಿನ ತಮ್ಮ ಸಾಲವನ್ನು ಮರುಪಾವತಿಸಿರುವ ನೇಕಾರರಿಗೂ ಸಹ ಅವರು ಪಾವತಿಸಿರುವ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಯೋಜನೆಯ ಸೌಲಭ್ಯವನ್ನು ಒದಗಿಸಲಾಗುವುದು.
  16. ನೇಕಾರರ ಸಮ್ಮಾನ್ ಯೋಜನೆ ಎಂಬ ಹೊಸ ಯೋಜನೆಯನ್ನು ಘೋಷಿಸಲು ಇಚ್ಛಿಸುತ್ತೇನೆ. ಈ ಯೋಜನೆಯಡಿಯಲ್ಲಿ ನಮ್ಮ ರಾಜ್ಯದಲ್ಲಿರುವ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2000 ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
    ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ.
  17. ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮ ಕ್ರಮವಹಿಸಲಾಗುವುದು. ಮುಂದುವರೆದು ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು.
  18. ಎಲ್ಲ ಪರಿಹಾರ ಸೌಲಭ್ಯಗಳನ್ನು ಅಂದಾಜು ರೂ. 1610 ಕೋಟಿಗಳ ವೆಚ್ಚದಲ್ಲಿ ಮಾಡಲಾಗುವುದು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: CM B S YediyurappaCoronavirusCovid19IndiaKannadaNewsWebsiteLatestNewsKannadaState Governmentಕೊರೋನಾ ವೈರಸ್ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಾಜ್ಯ ಸರ್ಕಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

Next Post

ಸದಾನಂದ ಗೌಡ-ಕನ್ನಡಿಗಾಸ್ ಹೆಲ್ಪ್ ಲೈನ್ ಮಾತುಕತೆ ಸಫಲ: ದುಬೈನಿಂದ ಕರ್ನಾಟಕಕ್ಕೂ ಹಾರಲಿದೆ ವಿಮಾನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸದಾನಂದ ಗೌಡ-ಕನ್ನಡಿಗಾಸ್ ಹೆಲ್ಪ್ ಲೈನ್ ಮಾತುಕತೆ ಸಫಲ: ದುಬೈನಿಂದ ಕರ್ನಾಟಕಕ್ಕೂ ಹಾರಲಿದೆ ವಿಮಾನ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL