ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ಇಲ್ಲಿನ ಕಂಡಿವಲಿ ಪಶ್ಚಿಮ ಪ್ರದೇಶದಲ್ಲಿ ಬೃಹತ್ ಕಟ್ಟಡವೊಂದು ಕುಸಿದುಬಿದ್ದಿದ್ದು, ಇದರಲ್ಲಿ ಸಿಲುಕಿದ್ದ 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ತುರ್ತು ಕಾರ್ಯಾಚರಣೆ ನಡೆಸಿ, ಕಟ್ಟಡದ ಮೊದಲ ಅಂತಸ್ಥಿನಲ್ಲಿ ಸಿಲುಕಿದ್ದ 12 ಹಾಗೂ ನೆಲ ಅಂತಸ್ಥಿನಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿದೆ.
ಇಂದು ಮುಂಜಾನೆ 5.13ಕ್ಕೆ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವರದಿಯಾದ ಕೂಡಲೇ ಎನ್‌ಡಿಆರ್‌ಎಫ್‌ನ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಲು ಘಟನಾ ಸ್ಥಳಕ್ಕೆ ಧಾವಿಸಿತು. ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ತಂಡದೊಂದಿಗೆ 4 ಅಗ್ನಿಶಾಮಕ ವಾಹನ ಮತ್ತು 1 ಆಂಬ್ಯುಲೆನ್ಸ್ ಸಿಬ್ಬಂದಿಗಳು ಸಹಕಾರ ನೀಡಿದ್ದಾರೆ.
Get in Touch With Us info@kalpa.news Whatsapp: 9481252093
















