ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್’ನಿಂದಾಗಿ ಈಗಾಗಲೇ ರಾಜ್ಯ ತೊಂದರೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡುವುದು ಬೇಡ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಕೇಳಿರುವ ಹಿನ್ನಲೆಯಲ್ಲಿ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈಗಾಗಲೇ ಇಬ್ರಾಹಿಂ ಮತ್ತು ಜಮೀರ್ ಅಹ್ಮದ್ ಅವರು ಈಗಾಗಲೇ ತಬ್ಲಿಘಿಗಳಿಗೆ ಸಪೋರ್ಟ್ ಮಾಡಿ ಏನಾಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಅದಕ್ಕೆ ನಾನು ಇಂದು ಮುಖ್ಯಮಂತ್ರಿಗಳಿಗೆ ಅವರ ಮನವಿ ತಿರಸ್ಕರಿಸಬೇಕೆಂದು ವಿನಂತಿಸುತ್ತೇನೆ. ರಾಜ್ಯದಲ್ಲಿ ಹಿಂದೆ ಆಗಿರುವ ಅನಾಹುತಗಳಿಗಳು ಮತ್ತೆ ಮರುಕಳಿಸಬಾರದು ಎಂದು ತಿಳಿಸಿದರು.
Get in Touch With Us info@kalpa.news Whatsapp: 9481252093















