ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೇಂದ್ರ ಸರ್ಕಾರ ನಿಗದಿಪಡಿಸಿದ ಸ್ಮಾರ್ಟ್ ಸಿಟಿ ಶ್ರೇಯಾಂಕ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ ರಾಜ್ಯ ಮಟ್ಟದಲ್ಲಿ 2ನೆಯ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ 13ನೆಯ ಸ್ಥಾನ ದೊರೆತಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಚಿದಾನಂದ ಎಸ್. ವಟಾರೆ, ಕೋವಿಡ್19 ನಿರ್ಬಂಧದ ಕಾರಣ ಕಾಮಗಾರಿ ಅನುಷ್ಠಾನದಲ್ಲಿ ಅಡಚಣೆ ಉಂಟಾಗಿದ್ದರೂ, ಹಲವು ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ್ದೇವೆ ಎಂದಿದ್ದಾರೆ.
ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸುವ ಹಂತ-2ಕ್ಕೆ 26.06 ಕೋಟಿ ರೂ. ಕಾಮಗಾರಿಗೆ ಕಾರ್ಯಾದೇಶ ನೀಡಿರುವುದು, ಖಾಸಗಿ ಬಸ್ ನಿಲ್ದಾಣ ಹತ್ತಿರದ ಬೀದಿವ್ಯಾಪಾರಿಗಳ ವಲಯ ನಿರ್ಮಾಣ ಕಾಮಗಾರಿಯ 12.42 ಕೋಟಿ ರೂ. ಮೌಲ್ಯದ ಟೆಂಡರ್ ಪ್ರಕ್ರಿಯೆ ನಡೆಸಿರುವುದು, ಶಿವಮೊಗ್ಗ ನಗರದಲ್ಲಿ ಎಲ್’ಇಡಿ ಬೀದಿ ದೀಪಗಳ ಅಳವಡಿಕೆ ಕಾರ್ಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093






Discussion about this post