ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ಗ್ರಾಮೀಣ ಭಾಗದಲ್ಲಿರುವ ನಿರುದ್ಯೋಗಿಗಳಿಗೆ ಮನ್ರೇಗಾ ಯೋಜನೆಯ ಅಡಿಯಲ್ಲಿ ಉದ್ಯೋಗ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಆದೇಶಿಸಿದರು.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲೇಶ್ವರ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ನಿರುದ್ಯೋಗಿ ಜನತೆಗೆ ಮನ್ರೇಗಾ ಯೊಜನೆಯಡಿಯಲ್ಲಿ ಉದ್ಯೊಗ ಕಲ್ಪಿಸಿ ಅವರಿಗೆ ಆರ್ಥಿಕ ಪುನಶ್ಚೇತನ ಹೊಂದಲು ಅವಕಾಶ ಕಲ್ಪಿಸಬೇಕು. ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶ ವಾಪಸ್ ಬಂದಿರುವ ಎಲ್ಲರಿಗೂ ಜಾಬ್ ಕಾರ್ಡ್ ಕೂಡಲೇ ನೀಡುವ ಮೂಲಕ ಅವರೆಲ್ಲರಿಗೂ ಸಹ ಮನ್ರೇಗಾ ಯೋಜನೆಯಡಿಯಲ್ಲಿ ಉದ್ಯೊಗ ನೀಡಿ ಪ್ರಧಾನ ಮಂತ್ರಿಯವರ ಆರ್ಥಿಕ ಪ್ಯಾಕೇಜ್’ನ ಆಶಯ ಗ್ರಾಮದ ಕಟ್ಟ ಕಡೆಯ ಮನುಷ್ಯನಿಗೂ ತಲುಪುವಂತೆ ಕಾರ್ಯೊನ್ಮುಖರಾಗಲು ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೂ, ತಾಲೂಕು ಪಂಚಾಯತ್ ಅಧಿಕಾರಿಗೆ ಆದೇಶಿಸಿದರು.
ಮನ್ರೇಗಾ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಕರ್ತವ್ಯಲೋಪವನ್ನು ಮತ್ತು ವಿಳಂಬವನ್ನು ತಾನು ಸಹಿಸುವದಿಲ್ಲ ಎಂದು ಕಠಿಣ ಶಬ್ದಗಳಿಂದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಮತ್ತು ಜಿಲ್ಲಾ ಪಂಚಾಯತ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093





Discussion about this post