ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗ್ರಾಮ ಪಂಚಾಯ್ತಿ ಚುನಾವಣೆ ಮುಂದಕ್ಕೆ ಹೋಗಿರುವ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಟಿ ಬೀಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಪಂ ಅಧಿಕಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಮಿತಿ ರಚನೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರುಗಳು ಬೀದಿಗಳಿದು ಹೋರಾಟ ಮಾಡುತ್ತೇವೆ ಎಂದು ಹೇಳುತ್ತಾರೆ. ನಾವೂ ಸಹ ಹೋರಾಟ ಮಾಡಿಯೇ ಅಧಿಕಾರಕ್ಕೆ ಬಂದವರು. ಅವರು ಬೀದಿಗೆ ಇಳಿಯುವುದಾದರೆ ಇಳಿಯಲಿ. ಅದನ್ನೂ ಸಹ ನಾವು ನೋಡುತ್ತೇವೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
Get in Touch With Us info@kalpa.news Whatsapp: 9481252093
















