ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಮೇ 31ರವರೆಗೂ ವಿಸ್ತರಣೆ ಮಾಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಹುತೇಕ ಸಡಿಲಿಕೆ ಮಾಡಲಾಗಿದ್ದರೂ, ಇನ್ನು ಮುಂದೆ ಪ್ರತಿ ಭಾನುವಾರ ರಾಜ್ಯದಾದ್ಯಂತ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಮಾಡಲಾಗುತ್ತದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಂಜಾಗ್ರತಾ ಕ್ರಮವಾಗಿ ಇಂತಹ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಪ್ರತಿ ಭಾನುವಾರ ರಾಜ್ಯದಾದ್ಯಂತ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಮಾಡಲಾಗುತ್ತದೆ. ಆ ದಿನಗಳಲ್ಲಿ ತುರ್ತು ಸೇವೆಗಳ ಹೊರತಾಗಿ ಇನ್ನಾವುದೇ ರೀತಿಯ ವ್ಯಾಪಾರ, ವ್ಯವಹಾರಕ್ಕೆ ಹಾಗೂ ವಾಹನ-ಜನ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post