ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಮೇ 19ರಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರುದ್ರೇಗೌಡರು, ಮೇಘರಾಜ್ ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರುವರು.
ಅಂದು ಬೆಳಿಗ್ಗೆ 8ಕ್ಕೆ ಮಲೆಶಂಕರದಲ್ಲಿ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಲೆಶಂಕರ ದೇವಸ್ತಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಬೆ.8.30ಕ್ಕೆ ಕುಂಸಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಕುಂಬೇಶ್ವರ ಸಾರ್ವಜನಿಕ ಸಮುದಾಯ ಭವನ, 40 ಲಕ್ಷ ರೂ.ಗಳ ವೆಚ್ಚದಲ್ಲಿ ವೆಂಕಟೇಶ್ವರ ಸಮುದಾಯ ಭವನ, 30 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ದೇವಸ್ತಾನದ ಹತ್ತಿರ ಸಮುದಾಯ ಭವನ ನಿರ್ಮಾಣ, ಬೆ.9ಕ್ಕೆ ಬಾಳೆಕೊಪ್ಪದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ಕರಿಬಸವೇಶ್ವರ ದೇವಸ್ತಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಸರ್ವೇ ನಂ.108ರಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸರ್ವೇ ನಂ.268ರಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ 50ಲಕ್ಷ ರೂ.ಗಳ ವೆಚ್ಚದಲ್ಲಿ ಕುಂಸಿ-ಹಾರನಹಳ್ಳಿ ಮುಖ್ಯ ರಸ್ತೆಯಿಂದ ಹುಬ್ಬನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ದಿ, 25 ಲಕ್ಷ ರೂ.ಗಳ ವೆಚ್ಚದಲ್ಲಿ ಬಸವೇಶ್ವರ ಸಮುದಾಯ ಭವನ, ಬೆಳಿಗ್ಗೆ 10 ಗಂಟೆಗೆ ಸೋಮಿನಕೊಪ್ಪದಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 20 ಲಕ್ಷ ರೂ.ಗಳ ವೆಚ್ಚದಲ್ಲಿ ಗ್ರಾಮದ ಪ್ರೌಢಶಾಲೆಯ ಮುಂದಿನ ರಸ್ತೆ ಅಭಿವೃದ್ಧಿ, 10.30ಕ್ಕೆ ಹಾಡೋನಹಳ್ಳಿಯಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಆಂಜನೇಯಸ್ವಾಮಿ ದೇವಸ್ತಾನದ ಹತ್ತಿರ ಸಮುದಾಯ ಭವನ ನಿರ್ಮಾಣ, 11.30 ಕ್ಕೆ ಸೈದರ ಕಲ್ಲಹಳ್ಳಿಯಲ್ಲಿ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ರಂಗನಾಥ ಸ್ವಾಮಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 12ಕ್ಕೆ ಅರಿಸಿನಘಟ್ಟದಲ್ಲಿ 40 ಲಕ್ಷ ರೂ.ಗಳ ವೆಚ್ಚದಲ್ಲಿ ರುದ್ರೇಶ್ವರ ಸಾರ್ವಜನಿಕ ಸಮುದಾಯ ಭವನದ ಮುಂದುವರೆದ ಕಾಮಗಾರಿ, 12.30ಕ್ಕೆ ಆನವೇರಿಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಮಾವುರದಮ್ಮ ದೇವಸ್ಥಾನ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 3.30ಕ್ಕೆ ಮಲ್ಲಾಪುರದಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಗುಡುಮಲ್ಲೇಶ್ವರ ಸಾರ್ವಜನಿಕ ಸಮುದಾಯ ಭವನದ ಮುಂದುವರೆದ ಕಾಮಗಾರಿ ನಂತರ ಕನಸಿನಕಟ್ಟೆ ಗ್ರಾಮದಲ್ಲಿ 50ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿಯ ವೀಕ್ಷಣೆ, ಸಂಜೆ 4ಕ್ಕೆ ಹೊಳೆಹೊನ್ನೂರಿನಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ದೇವಸ್ತಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 4.30ಕ್ಕೆ ಕೂಡಲಿಯಲ್ಲಿ 35 ಲಕ್ಷ ರೂ.ಗಳ ವೆಚ್ಚದಲ್ಲಿ ಶೃಂಗೇರಿ ಮಠದ ಹತ್ತಿರ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಾಣ, 15 ಲಕ್ಷ ರೂ.ಗಳ ವೆಚ್ಚದಲ್ಲಿ ಪಾರ್ವತಿ ಪರಮೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸಂಜೆ 5ಕ್ಕೆ ಹಸೂಡಿಯಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸಂಜೆ 5.30ಕ್ಕೆ ಯಲವಟ್ಟಿಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಬೆಕ್ಕಿನಕಲ್ಮಠ ಜಗದ್ಗುರು ಗಂಗಾಧರೇಶ್ವರ ಗದ್ದುಗೆ ಹತ್ತಿರ ಸಮುದಾಯ ಭವನ ನಿರ್ಮಾಣ ಮತ್ತು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಗಾರಿಗಳಿಗೆ ಗುದ್ದಲಿ ಪೂಜೆ ನಡೆಸುವರು.
Get in Touch With Us info@kalpa.news Whatsapp: 9481252093
Discussion about this post