Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೋವಿಡ್19‌ ಅನುಭವ ಭಾರತವನ್ನು ಅಗ್ರಮಾನ್ಯ ರಾಷ್ಟ್ರವನ್ನಾಗಿಸಲಿದೆ: ಡಾ. ಅಶ್ವತ್ಥನಾರಾಯಣ

May 18, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ತಂತ್ರಜ್ಞಾನ ಬಳಸಿಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೋವಿಡ್19 ನಮಗೆ ಹೇಳಿಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ ಸಂಘಟನೆ) ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಕೋವಿಡ್19ನಿಂದಾಗಿ ಆರೋಗ್ಯ ಸಮಸ್ಯೆ, ಸಾವು-ನೋವು ಸಂಭವಿಸಿದೆ. ಇದೊಂದು ಹಿನ್ನಡೆಯೂ ಹೌದು. ಇದಕ್ಕೆ ಯಾವ ಸಿದ್ಧತೆಯನ್ನೂ ಮಾಡಿಕೊಂಡಿರಲಿಲ್ಲ ಎಂಬುದೂ ಸತ್ಯ. ಆದರೆ, ಈ ಸಮಸ್ಯೆಯನ್ನು ಒಂದು ಅವಕಾಶವಾಗಿ ಬಳಸಿಕೊಂಡು ಅತ್ಯಂತ ವೇಗವಾಗಿ ಬದಲಾವಣೆಗಳಿಗೆ ಒಗ್ಗಿಕೊಂಡು ಹೊಸ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡೆವು. ತಂತ್ರಜ್ಞಾನದ ಮೂಲಕ ಎಲ್ಲವೂ ಸಾಧ್ಯ ಎಂಬುದನ್ನು ತೋರಿಸಿದ್ದೇವೆ,” ಎಂದರು.

“ನಾವು ಬದಲಾವಣೆಗೆ ಎಷ್ಟೊಂದು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಹೊಂದಿಕೊಂಡಿದ್ದೇವೆ ಎಂದರೆ ಕೆಲವೊಂದು ವಿಭಾಗಗಳಲ್ಲಿ ಮಾತ್ರ ಲಾಕ್‌ಡೌನ್ ನಿಂದ ತೊಂದರೆಯಾಗಿದೆಯೇ ಹೊರತು ಬಹುತೇಕ ಕ್ಷೇತ್ರಗಳಲ್ಲಿ ಹೆಚ್ಚಿನ ದುಷ್ಪರಿಣಾಮ ಆಗಲಿಲ್ಲ. ಟೆಲಿಮೆಡಿಸಿನ್, ಟೆಲಿ ಕನ್ಸಲ್ಟಿಂಗ್ ಮೂಲಕ ಜನರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ತಲುಪಿಸಿದ್ದೇವೆ. ಜನರಿಗೆ ಪಡಿತರ, ಔಷಧ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸಲಾಗಿದೆ. ಪಡಿತರ ವಿತರಣೆಯಲ್ಲಿ ಭಾರತ, ಅದರಲ್ಲೂ ಕರ್ನಾಟಕ ಮಾಡಿರುವ ಸಾಧನೆ ವಿಶ್ವಕ್ಕೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ,” ಎಂದು ತಿಳಿಸಿದರು.

ಮೋದಿಯೇ ದೊಡ್ಡ ನಂಬಿಕೆ
“ಇಂತಹ ಸಮಸ್ಯೆಗಳು ಎದುರಾದಾಗ ರಾತ್ರೋರಾತ್ರಿ ಎಲ್ಲವೂ ಬಗೆಹರಿಯಬೇಕು ಎಂದು ಬಯಸುತ್ತಾರಾದರೂ ಅದು ಸಾಧ್ಯವಾಗುವುದಿಲ್ಲ. ಆದರೆ, ಭಾರತೀಯರಲ್ಲಿ ನಂಬಿಕೆಯೇ ಅತಿ ದೊಡ್ಡ ಶಕ್ತಿ. ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಪಾಲಿಗೆ ನಂಬಿಕೆಯಾಗಿದ್ದು, ಈ ನಂಬಿಕೆ ನಮ್ಮನ್ನು ಸಮಸ್ಯೆಯಿಂದ ಕಾಪಾಡಿದೆ. ಕೆಲವು ದುಷ್ಟ ಶಕ್ತಿಗಳು ಈ ಪರಿಸ್ಥಿತಿಯ ದುರ್ಲಾಭ ಪಡೆದು ಏನೆೇನೋ ಮಾಡಬೇಕು ಎಂದು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ,” ಎಂದು ಹೇಳಿದರು.

“ಕೋವಿಡ್ ಸಮಸ್ಯೆಯನ್ನು ದೇಶ ಒಗ್ಗಟ್ಟಿನಿಂದ ಎದುರಿಸಿದೆ. ಜನ ಭಾವನಾತ್ಮಕವಾಗಿಯೂ ಸರ್ಕಾರದ ಜತೆ ಕೈಜೋಡಿಸಿದ್ದಾರೆ ಎಂಬುದಕ್ಕೆ ಕೊರೊನಾ ವಾರಿಯರ್ಸ್‌ಗೆ ದೇಶದ ಜನ ಸಲ್ಲಿಸಿದ ಗೌರವವೇ ಸಾಕ್ಷಿ. ಅದೇ ರೀತಿ ಅಮೆರಿಕದಲ್ಲಿ ಭಾರತೀಯ ಮೂಲದ ಡಾ.ಉಮಾರಾಣಿ ಅವರ ಸೇವೆಗೆ ಸಂದ ಗೌರವ ಭಾರತೀಯರು ಯಾವ ರೀತಿ ಸೇವಾ ಮನೋಭಾವ ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮುಂಚೂಣಿಯಲ್ಲಿ ಕರ್ನಾಟಕ
“ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ಕರ್ನಾಟಕದಲ್ಲಿ 2 ಪ್ರಯೋಗಾಲಯಗಳಲ್ಲಿ ಮಾತ್ರ ಪರೀಕ್ಷೆ ನಡೆಸಲು ಅವಕಾಶವಿತ್ತು. ಟೆಸ್ಟ್ ಕಿಟ್, ನಿರ್ದಿಷ್ಟ ಆಸ್ಪತ್ರೆ, ಪಿಪಿಇ ಕಿಟ್, ಎನ್‌ 95 ಮಾಸ್ಕ್‌ ಯಾವುದೂ ಇರಲಿಲ್ಲ. ಆದರೆ, ತ್ವರಿತಗತಿಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡೆವು. ಪ್ರಸ್ತುತ ರಾಜ್ಯದಲ್ಲಿ 35 ಪ್ರಯೋಗಾಲಯಗಳಿದ್ದು, ನಿತ್ಯ 35 ಸಾವಿರ ಟೆಸ್ಟ್ ಮಾಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದೇವೆ. ಕೋವಿಡ್ ಚಿಕಿತ್ಸೆಗಾಗಿ 39 ಸಾವಿರ ಹಾಸಿಗೆ ಮೀಸಲಿಡಲಾಗಿದ್ದು, ಜಿಲ್ಲಾ, ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೂ ಆಕ್ಸಿಜನ್ ಸೌಲಭ್ಯ ಒದಗಿಸಲಾಗಿದೆ. ಟೆಲಿ ಐಸಿಯೂ ಘಟಕಗಳಿವೆ. ಪಿಪಿಇ ಕಿಟ್‌ನಲ್ಲಿ ಸ್ವಾವಂಬನೆ ಸಾಧಿಸಿದ್ದೇವೆ. ಹೊಸ ವೆಂಟಿಲೇಟರ್ಸ್ ಸಂಖ್ಯೆ ಲಕ್ಷಕ್ಕೆ ಹೆಚ್ಚಿದೆ,” ಎಂದು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

“ಕೋವಿಡ್ ವಿಚಾರದಲ್ಲಿ ನಮಗೆ ಸವಾಲಾಗಿದ್ದು ವಲಸೆ ಕಾರ್ಮಿಕರು. ಅವರಿಗೆ ಊಟ, ವಸತಿ ಕಲ್ಪಿಸುವುದು ಕಷ್ಟ. ಅಲ್ಲದೆ, ರಾಜ್ಯಕ್ಕೆ ಬರುವವರು ಹೋಗುವವರು ಸಂಖ್ಯೆಯೂ ಹೆಚ್ಚು. ಇನ್ನೊಂದಡೆ ಹೊರರಾಜ್ಯದಿಂದ ಬಂದ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡುವುದು ಕೂಡ ಕಷ್ಟಸಾದ್ಯವಾಗಿತ್ತು. ಆದರೆ, ಎಎದೆಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ,” ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಾ.ಅಶ್ವತ್ಥನಾರಾಯಣ, “ಕೋವಿಡ್ ಚಿಕಿತ್ಸೆಗೆ ಅಗತ್ಯ ಮಾದರಿ ಸಂಗ್ರಹಿಸಲು ಮೊಬೈಲ್ ವಾಹನ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆಗೂ ಯೂನಿವರ್ಸಲ್ ಸ್ಕ್ರೀನಿಂಗ್, ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ತಂತ್ರಜ್ಞಾನವನ್ನು ಸಂಪೂರ್ಣ ಬಳಕೆಮಾಡಿಕೊಂಡು ಜನರ ಆರೋಗ್ಯ ಮಾಹಿತಿ ಸಂಗ್ರಹಿಸುವ ಮೂಲಕ ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆ ಎದುರಾದರೆ ಆಗ ಮಾಹಿತಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ,” ಎಂದು ಹೇಳಿದರು.

ಕರ್ನಾಟಕದ ಬಗ್ಗೆ ವೈದ್ಯರ ಮೆಚ್ಚುಗೆ
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಅದರಲ್ಲೂ ಮುಖ್ಯವಾಗಿ‌ ಕರ್ನಾಟಕದ ಸಾಧನೆ ಬಗ್ಗೆ ಅಮೆರಿಕದಲ್ಲಿ ಕೊರೊನಾಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಅಕ್ಕ ಬಳಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಾಧನೆಗಾಗಿ ಸರ್ಕಾರ ಮತ್ತು ರಾಜ್ಯದ ಜನತೆಗೆ ಡಾ.ಅಶ್ವತ್ಥನಾರಾಯಣ ಅವರ ಮೂಲಕ ಅಭಿನಂದಿಸಿದರು.

ಸಂವಾದದಲ್ಲಿ ಅಮೆರಿಕದಲ್ಲಿ ಕೋವಿಡ್19 ಚಿಕಿತ್ಸೆ ನೀಡುತ್ತಿರುವ ಕರ್ನಾಟಕ ಮೂಲದ ವೈದ್ಯರಾದ ಡಾ.ಅನುರಾಧ ತಾವರೇಕೆರೆ, ಡಾ.ಕಲ್ಪನಾ ಉದಯ್, ಡಾ.ಉಮಾರಾಣಿ ಮಧುಸೂಧನ್, ಭಾರತದ ಜತೆಗಿನ ಸಮನ್ವಯಕಾರರಾದ ಡಾ.ಶಾಲಿನಿ ನಲ್ವಾಡ್ ತಮ್ಮ ಅನುಭವ ಹಂಚಿಕೊಂಡರಲ್ಲದೇ, ಹಲವು ಸಲಹೆಗಳನ್ನು ನೀಡಿದರು. ಅಕ್ಕ ಸಂಘಟನೆ ಅಧ್ಯಕ್ಷ ಅಮರನಾಥ ಗೌಡ, ದಯಾನಂದ್ ತುಮಕೂರು, ಸುರೇಶ್ ಕೃಷ್ಣಪ್ಪ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUCoronavirusCovid19IndiaDCM AshwathnarayanKannadaNewsWebsiteLatestNewsKannadaಕೋವಿಡ್19ಡಿಸಿಎಂ ಅಶ್ವತ್ಥನಾರಾಯಣಬೆಂಗಳೂರು
Previous Post

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

Next Post

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!