ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತುಮಕೂರು: ಪಾಕಿಸ್ಥಾನ, ಬಾಂಗ್ಲಾದೇಶ ದೇಶದಲ್ಲಿ ಹಿಂದುಗಳು ಬದುಕುವುದು ದುಸ್ಥರವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಾದ ಶಾಸಕರಾದ ಜಮೀರ್ ಅಹಮ್ಮದ್, ಇಬ್ರಾಹಿಂ, ಹ್ಯಾರಿಸ್ ಸೇರಿದಂತೆ ಇವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ತತಕ್ಷಣವೇ ಇವರ ಮೇಲೆ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್‌ನವರು ಪ್ರಧಾನ ಮಂತ್ರಿಗಳ ಪರಿಹಾರದ ನಿಧಿಗೆ ಹಾಗೂ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ವಕ್ಫ್ ಬೋರ್ಡ್‌ನಿಂದ ಪತ್ರ ಬರೆದರೆ ಅದನ್ನು ವಿರೋಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನೆ ಮಾಡಿದರು.
ನಾನು ಸ್ಪೀಕರ್ ಅವರಿಗೆ ಪತ್ರ ಬರೆಯುತ್ತಿದ್ದೇನೆ. ಕೂಡಲೇ ಶಾಸಕ ಜಮೀರ್ ಅಹಮ್ಮದ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಿ.ಎಂ. ಇಬ್ರಾಹಿಂ ಇವರ ಸದಸ್ಯತ್ವ ರದ್ದು ಪಡಿಸಬೇಕು ಎಂದರು.
Get in Touch With Us info@kalpa.news Whatsapp: 9481252093
Discussion about this post