ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಂಟೈನ್ಮೆಂಟ್ ಝೋನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ನಗರ ಹಾಗೂ ಹಳೇ ಸೊರಬವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಜನರ ಓಡಾಟಕ್ಕೆ ನಿರ್ಬಂಧಗಳಿದ್ದು, ಪ್ರತಿ ಮನೆಯಲ್ಲೂ ನಿಗಾ ವಹಿಸಲಾಗುತ್ತದೆ ಎಂದರು.
ಸಾಮಾನ್ಯವಾಗಿ 100 ಮೀಟರ್’ವರೆಗೂ ಕಂಟೈನ್ಮೆಂಟ್ ಝೋನ್ ಹಾಗೂ 6-7 ಕಿಮೀವರೆಗೂ ಬಫರ್ ಝೋನ್ ಆಗಿ ಮಾಡಲಾಗುತ್ತದೆ ಎಂದರು.
Get in Touch With Us info@kalpa.news Whatsapp: 9481252093
Discussion about this post