ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರದಂತೆ ಜಿಲ್ಲೆಯಲ್ಲೂ ಸಹ ಜೂನ್ 25ರಿಂದ ಜುಲೈ 3ರವರೆಗೂ ಎಸ್’ಎಸ್’ಎಲ್’ಸಿ ಪರೀಕ್ಷೆ ನಡೆಯಲಿದ್ದು, ಇದ್ಕಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 24243 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 12287 ಬಾಲಕರು ಹಾಗೂ 11956 ಬಾಲಕಿಯರು ಇದ್ದಾರೆ.
ಒಟ್ಟು 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 45 ಸರ್ಕಾರಿ, 24 ಅನುದಾನಿತ, 15 ಅನುದಾನ ರಹಿತ ಹಾಗೂ 2 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಭದ್ರಾವತಿ 15, ಹೊಸನಗರ 5, ಸಾಗರ 10, ಶಿಕಾರಿಪುರ 11, ಶಿವಮೊಗ್ಗ 26, ಸೊರಬ 10 ಮತ್ತು ತೀರ್ಥಹಳ್ಳಿಯಲ್ಲಿ 7 ಪರೀಕ್ಷಾ ಕೇಂದ್ರಗಳಿವೆ.
Get In Touch With Us info@kalpa.news Whatsapp: 9481252093
















