ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಉಕ್ಕಿನ ನಗರಿನ ಬಹುವರ್ಷಗಳ ಬೇಡಿಕೆಯಾಗಿದ್ದ ಜಿಲ್ಲೆಯ ಪ್ರತಿಷ್ಠಿತ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಮಹತ್ವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆದಿದ್ದು, ಎಂಪಿಎಂ ಕಾರ್ಖಾನೆಯನ್ನು ಪುನಾರಂಭಿಸುವ ನಿರ್ಧಾರ ಕೈಗೊಂಡು, ಇದಕ್ಕಾಗಿ ಅಗತ್ಯ ರೂಪುರೇಷೆ ಸಿದ್ದಪಡಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಯಿತು.
ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ತ್ವರಿತಗತಿಯಲ್ಲಿ ಕಾರ್ಯ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಭದ್ರಾವತಿ ಎಂ.ಪಿ.ಎಂ ಕಾರ್ಖಾನೆ ಪುನಶ್ಚೇತನ ಮತ್ತು ಅಭಿವೃದ್ಧಿಯ ಬಗ್ಗೆ ಕೈಗಾರಿಕೆ ಮತ್ತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಲಾಯಿತು. @CMofKarnataka @BSYBJP pic.twitter.com/4dTvBCwkpq
— B Y Raghavendra (@BYRBJP) June 6, 2020
ಇತ್ತೀಚಿನ ಕೆಲವು ವರ್ಷಗಳಿಂದ ಹಲವು ಸಮಸ್ಯೆಗಳಿಂದ ರೋಗಗ್ರಸ್ಥವಾಗಿದ್ದ ಕಾರ್ಖಾನೆಯ ಸ್ಥಗಿತಗೊಂಡಿದ್ದರಿಂದ ಸಹಸ್ರಾರು ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಅಸಂಖ್ಯಾತ ನೌಕರರು ಕುಟುಂಬದ ನಿರ್ವಹಣೆಗಾಗಿ ಕೆಲಸವನ್ನರಸಿ ಊರು ತೊರೆದಿದ್ದರೆ ಮತ್ತೆ ಕೆಲವರು ಸರ್ಕಾರ ವಿವಿಧ ಇಲಾಖೆಗಳಲ್ಲಿ ಎರವಲು ಸೇವೆ ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲ ಕಾರ್ಖಾನೆಯ ಯಂತ್ರಗಳು ತುಕ್ಕು ಹಿಡಿಯುವಂತಾಗಿತ್ತು. ಇದರಿಂದಾಗಿ ಇಡಿಯ ಭದ್ರಾವತಿ ನಗರದ ಅಭಿವೃದ್ಧಿಗೆ ಭಾರೀ ಹೊಡೆತ ಬಿದ್ದಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿಗಳ ಗಮನಸೆಳೆದು ಒತ್ತಾಯಿಸಿದ್ದು, ಇದು ಈಗ ಫಲ ನೀಡುವ ಕಾರ್ಯ ಆರಂಭವಾಗಿದೆ.
ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ, ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಪಿಸಿಸಿಎಫ್ ಸಂಜಯ್ ಮೋಹನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪಕೌರ್ ಇದ್ದರು.
Get In Touch With Us info@kalpa.news Whatsapp: 9481252093
Discussion about this post