ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ: ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಹ ಒಂದು. ಪ್ರಾರಂಭದಿಂದಲೂ ಕಾರ್ಖಾನೆಯ ಅಭಿವೃದ್ಧಿಯ ಜೊತೆ ಜೂತೆಗೆ ಉದ್ಯೋಗಿಗಳಿಗೆ ಮತ್ತು ಎಲ್ಲಾ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಕಾರ್ಖಾನೆಯಾಗಿದೆ. ಪ್ರಾರಂಭದಿಂದಲೂ ಅಂದರೆ 1993 ನೇಯ ಸಾಲಿನಿಂದ ಪ್ರತಿವರ್ಷವೂ ಜೂನ್ ತಿಂಗಳ ಮೊದಲ ವಾರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ.
ಸುತ್ತಮುತ್ತಲಿನ ಜನ ಸಾಮಾನ್ಯರಿಗೆ, ಕಾರ್ಮಿಕರಿಗೆ ಮತ್ತು ಉದ್ಯೋಗಿಗಳಿಗೆ ಪರಿಸರದ ಬಗ್ಗೆ ಅರಿವನ್ನು ಮೂಡಿಸುವುದರ ಮೂಲಕ ಜಾಗೃತಿ ಮೂಡಿಸುವ ಒಂದು ಪ್ರಯತ್ನ ಮತ್ತು ಕಾರ್ಖಾನೆಗಳಲ್ಲಿ ಪರಿಸರಕ್ಕೆ ಹೆಚ್ಚಿನ ಗಮನ ನೀಡಿ ಪರಿಸರಕ್ಕೆ ಹಾನಿಯಾಗದಂತೆ ಕಾಪಾಡುವುದು ಮುಖ್ಯ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ಜುಲೈ 6ರ ಶನಿವಾರ ಪರಿಸರ ದಿನಾಚರಣೆಯ ಸಮಾರಂಭವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು, ಸಸಿ ನೆಡುವ ಕಾರ್ಯಕ್ರಮವನ್ನು ಕಾರ್ಖಾನೆಯ ಬೀಡು ಕಬ್ಬಿಣ ವಿಭಾಗದ ಆವರಣದಲ್ಲಿ ನಡೆಸಲಾಯಿತು.
ಕೊಪ್ಪಳ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ್ ಮಾತನಾಡಿ, ಪರಿಸರದ ಸಂರಕ್ಷಣೆ ಸರ್ಕಾರದ ಕೆಲಸ ಎಂಬ ಧೋರಣೆಯನ್ನು ಕೈಬಿಟ್ಟು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಮತ್ತು ಒಬ್ಬ ಉದ್ಯೋಗಿ ಒಂದು ಸಸಿಯನ್ನು ದತ್ತು ಸ್ವೀಕಾರ ಮಾಡಬೇಕು, ಮತ್ತು ಆ ಸಸಿಯನ್ನು ಬೆಳೆಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಕೊಪ್ಪಳ ಜಿಲ್ಲೆಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ಬಿ.ಸಿ. ಶಿವಮೂರ್ತಿ ಮಾತನಾಡಿ, ಪರಿಸರ ಸಂರಕ್ಷಣೆ ಒಗ್ಗೆ ತಿಳುವಳಿಕೆ ಮೂಡಿಸುವಲ್ಲಿ ಮುಂದಾದರು. ಈ ವರ್ಷ ದೇಶದಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗಿರುವುದರಿಂದ, ಜನಸಾಮಾನ್ಯರು, ಉದ್ಯೋಗಿಗಳು ಸಾಮಾಜಿಕ ಅಂತರ ಮತ್ತು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯ ನಿರ್ವಹಿಸಬೇಕಾಗಿದೆ. ಈ ಹಂತದಲ್ಲಿ ಪರಿಸರ ಸಂರಕ್ಷಣಾ ಕಾಳಜಿ ಮೂಡಿಸುವುದು ನಮ್ಮ ಮತ್ತು ನಿಮ್ಮೆಲ್ಲಾರ ಹೊಣೆಯಾಗಿದೆ ಎಂದು ತಿಳಿಸಿದರು.
ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆ ಅವರು ಮಾತನಾಡಿ, ಕೈಗಾರಿಕೆಯ ಆವರಣದಲ್ಲಿ 150000 ಗಿಡಮರಗಳನ್ನು ಬೆಳೆಸಲಾಗಿದೆ. ಪರಿಸರದ ಅಭಿವೃದ್ಧಿಗಾಗಿ ನೂತನ ತಂತ್ರಜ್ಞಾನ ಬಳಕೆ ಮಾಡಿ ಹೊಸ ಹೊಸದಾಗಿ ಯಂತ್ರಗಳನ್ನು ಅಳವಡಿಸಿ, ಕಾರ್ಖಾನೆಯಲ್ಲಿ ಹೊರಬರುವ ತ್ಯಾಜ್ಯವನ್ನು ನಿಯಂತ್ರಣ ಮಾಡಿ ಈ ಭಾಗದ ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಪ್ರತಿವರ್ಷ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಿ, ಜನಸಾಮಾನ್ಯರಲ್ಲಿ ಪರಿಸರ ಬಗ್ಗೆ ಕಾಳಜಿಯನ್ನು ಮೂಡಿಸುವಂತಹ ಕಾರ್ಯವನ್ನು ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸಿ ಪರಿಸರ ಸ್ನೇಹಿ ಕಾರ್ಖಾನೆಯಾಗಿರುತ್ತದೆ. ಈ ಸಂಧರ್ಭದಲ್ಲಿ ಅಧಿಕಾರಿಗಳಿಗೂ ಕಾರ್ಮಿಕರಿಗೂ ಶುಭಾಶಯ ಕೋರಿದರು.
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳಾದ ಶಿವಕುಮಾರ್ ಅವರು ಸಹ ಭಾಗವಹಿಸಿದ್ದರು. ಕಿರ್ಲೋಸ್ಕರ್ ಕಾರ್ಮಿಕ ಸಂಘದ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಗುತ್ತಿಗೆ ಕಾರ್ಮಿಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು ಈ ಕಾರ್ಯಗಳನ್ನು ಯಶಸ್ವಿಯಾಗಿ ನೆರವೇರಿಸಲು ಸಹಕಾರಿಯಾದರು. ಕಾರ್ಯಕ್ರಮವನ್ನು ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಆಯೋಜಿಸಿದ್ದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯ ಪ್ರೆಸಿಡೆಂಟ್ ಎನ್.ಬಿ. ಏಕತಾರೆ, ಹಣಕಾಸು ವಿಭಾಗದ ಮುಖ್ಯಸ್ಥರಾದ ಆರ್.ಎಸ್. ಶ್ರೀವತ್ಸನ್ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಪಿ. ನಾರಾಯಣ, ಬೀಡುಕಬ್ಬಿಣ ವಿಭಾಗದ ಉಪಾಧ್ಯಕ್ಷರಾದ ಎಂ.ಜಿ. ನಾಗರಾಜ್, ಎರಕ ವಿಭಾಗದ ಉಪಾಧ್ಯಕ್ಷರಾದ ಸಿ. ರಮೇಶ್ ಮತ್ತು ಕಾರ್ಮಿಕ ಮುಖಂಡರಾದ ಶೇಕಪ್ಪ ಚೌಡಕಿ, ಹನುಮೇಶ್ ಕಲಮಂಗಿ, ಕಂಠಿ ಬಸವರಾಜ್, ಎಲ್ಲಾ ವಿಭಾಗದ ಹಿರಿಯ ಅಧಿಕಾರಿಗಳು, ಕಾರ್ಮಿಕ ವರ್ಗ, ಗುತ್ತಿಗೆ ಕಾರ್ಮಿಕರು, ಭಾಗವಹಿಸಿದ್ದರು. ಪ್ರಥಮ ಹಂತದಲ್ಲಿ ಪರಿಸರ ಪ್ರತಿಜ್ಞೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಕೊಪ್ಪಳ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ್, ಕೊಪ್ಪಳದ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ಬಿ.ಸಿ. ಶಿವಮೂರ್ತಿ ಮತ್ತು ಸಹಾಯಕ ಅಧಿಕಾರಿ ಹನುಮಂತಪ್ಪ ನವರು ಸಮಾರಂಭದಲ್ಲಿ ಭಾಗವಹಿಸಿದರು. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ಕೊಪ್ಪಳ ಅರಣ್ಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಕೊಪ್ಪಳ ಇವರ ಸಹಕಾರದೊಂದಿಗೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಚ್ಚುಕಟ್ಟಾದ ಸಮಾರಂಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿಗಳಾದ ಮುರಳಿಧರ್ ನಾಡಿಗೇರ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕಳೆದ 2020-21 ನೇ ಸಾಲಿನ ಪರಿಸರ ವಿಭಾಗದ ವರದಿಯನ್ನು ರವಿಕುಮಾರ್ ಯಾದವ್ ಮಂಡಿಸಿದರು.
(ವರದಿ: ಮುರಳೀಧರ್ ನಾಡಿಗೇರ್)
Get In Touch With Us info@kalpa.news Whatsapp: 9481252093
Discussion about this post