ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಜಮ್ಮು ಕಾಶ್ಮೀರದ ಗಡಿಯಲ್ಲಿ ತೀವ್ರ ಉಪಟಳ ನೀಡುತ್ತಿರುವ ಉಗ್ರರ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರು 24 ಗಂಟೆಗಳ ಅವಧಿಯಲ್ಲಿ 9 ಭಯೋತ್ಪಾದಕರನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಪಿನ್ಜೋರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿದ ಯೋಧರು ಇಡಿಯ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ ಒಮ್ಮೆ ನಾಲ್ವರು ಹಾಗೂ ಇನ್ನೊಮ್ಮೆ ಐವರು ಭಯೋತ್ಪಾದಕರನ್ನು ಬಲಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post