No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೊಂದಣಿ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2020
in Small Bytes, ರಾಷ್ಟ್ರೀಯ
0
ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಆಧಾರ್ ನೊಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೊಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್.  ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ನಾಗರೀಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಜನಸೇವಕ ಯೋಜನೆಯನ್ನು ಪುನರಾರಂಭಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧದದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಹಾಗೂ ಬೆಂಗಳೂರಿನ ಸಂಬಂಧಿಸಿದ ವಿಧಾನಸಭಾ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಈ ಯೋಜನೆಯನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದರು.

ಪ್ರಸ್ತುತ ಜನಸೇವಕ ಯೋಜನೆ ಬೆಂಗಳೂರು ಮಹಾನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಿಯಲ್ಲಿದ್ದು, ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರೀಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇವೆಗಳು ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ತೀರಾ ಅಗತ್ಯವಾಗಿರುವ ಆಧಾರ್ ನೊಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು ನೊಂದಣಿ ಸೇವೆಗಳನ್ನು ತರಲಾಗುವುದು ಎಂದು ತಿಳಿಸಿದರು.

ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ತೀರಾ ಅಗತ್ಯವಾಗಿರುವುದರಿಂದ ಇಂತಹ ಸ್ಥಿತಿಯಲ್ಲಿ ಹಿರಿಯ ನಾಗರೀಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಹಿರಿಯರು ಈ ರೀತಿಯ ಕಷ್ಟಪಡುತ್ತಿರುವುದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೊಂದಣಿ ಮತ್ತು ಆಧಾರ್ ಅಪ್ಡೇಟ್ ಮಾಡುವ ಸೇವೆಗಳನ್ನು ಸಹ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ ಎಂದವರು ಹೇಳಿದರು.

ಪ್ರಸ್ತುತ ದಿನಮಾನಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಯೋ ವೃದ್ಧರು, ಅಸ್ವಸ್ಥ ವ್ಯಕ್ತಿಗಳು ಸುರಕ್ಷಿತವಾಗಿ ಮನೆಯಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಜನಸೇವಕ ಸಿಬ್ಬಂದಿ ನಾಗರೀಕರಲ್ಲಿ ಸುರಕ್ಷಿತ ಭಾವನೆಯನ್ನು ಮೂಡಿಸುವ ಸಲುವಾಗಿ ಜನಸೇವಕ ಸೇವೆಗಳನ್ನು ಪುನರಾರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಕ್ಷಣದಿಂದಲೇ ಈ ಸೇವೆಗಳ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಯೋಜನೆ ರೂಪಿಸಿ ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಭಾಗದ ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಜನಸೇವಕ ಯೋಜನೆ ಪುನರಾರಂಭ ಮತ್ತು ಆಧಾರ್ ನೊಂದಣಿಯಂತಹ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ವಿಧಾನಸಭಾ ಸದಸ್ಯರಾದ ಸತೀಶ್ ರೆಡ್ಡಿ (ಬೊಮ್ಮನಹಳ್ಳಿ), ಮಂಜುನಾಥ್ (ದಾಸರಹಳ್ಳಿ), ಡಿ.ಪಿ.ಎ.ಆರ್ ಇ-ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಸಕಾಲ ನಿರ್ದೇಶಕ ರಾಜೀವ್ ಚಾವ್ಲಾ, ಸಕಾಲ ಮಿಷನ್ ನಿರ್ದೇಶಕ-2 ವರಪ್ರಸಾದರಡ್ಡಿ ಮತ್ತಿತರರು ಭಾಗವಹಿಸಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUJanasevakaKannadaNewsWebsiteLatestNewsKannadaMinister Suresh Kumarಆಧಾರ್ಜನಸೇವಕಬೆಂಗಳೂರುಸಚಿವ ಎಸ್. ಸುರೇಶ್ ಕುಮಾರ್
Share219Tweet123Send
Previous Post

ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೋನಾ ಪಾಸಿಟಿವ್: 69ಕ್ಕೇರಿದ ಪ್ರಕರಣ

Next Post

ಜೂನ್ 10 ರಂದು ಹಳೇ ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಜೂನ್ 10 ರಂದು ಹಳೇ ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL