No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎನ್’ಪಿಎಸ್ ರದ್ದು, ಸರ್ಕಾರಿ ನೌಕರರಿಗೆ ಶಸ್ತ್ರಚಿಕಿತ್ಸೆ ನಗದುರಹಿತ ಚಿಕಿತ್ಸೆ ಸೌಲಭ್ಯ ಶೀಘ್ರ ಜಾರಿಗೆ ಆಗ್ರಹ

ವಿವಿಧ ಬೇಡಿಕೆ ಶೀಘ್ರ ಜಾರಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2020
in Small Bytes, ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್’ಪಿಎಸ್)ಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಸರ್ಕಾರವು ಘೋಷಿಸಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳಿಗೆ ನಗದುರಹಿತ ಚಿಕಿತ್ಸೆ ಸೌಲಭ್ಯ ಒದಗಿಸುವುದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರವಾಗಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯ ಸಭೆಯಲ್ಲಿ ಮಾತನಾಡಿದರು.

ನೌಕರರ ದಶಕಗಳ ಬೇಡಿಕೆಗಳನ್ನು ಅನುಷ್ಟಾನಗೊಳಿಸುವಲ್ಲಿ ಅನುಸರಿಸುತ್ತಿರುವ ಅನಗತ್ಯ ವಿಳಂಬದಿಂದಾಗಿ ನೌಕರರು ಎದುರಿಸುತ್ತಿರುವ ಸಂಕಷ್ಟಗಳನ್ನು ಸಮಿತಿಯ ಮುಂದೆ ಮಂಡಿಸಿದ್ದು, ಈ ಬಗ್ಗೆ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೇಡಿಕೆಗಳು ಈಡೇರುವ ವಿಶ್ವಾಸ ತಮಗಿರುವುದಾಗಿ ತಿಳಿಸಿದರು.

ಸುಮಾರು 20 ರಿಂದ 45 ವರ್ಷಗಳಿಂದ ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡದಿರುವುದರಿಂದ ನೌಕರರು ಪದೋನ್ನತಿಯಿಂದ ವಂಚಿತರಾಗುತ್ತಿದ್ದಾರೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವುದು ಇಂದಿನ ತುರ್ತು ವಿಷಯಗಳಲ್ಲೊಂದಾಗಿದೆ ಎಂದರು.

ಸರ್ಕಾರದ ಸುತ್ತೋಲೆಯಂತೆ ಪ್ರತಿ ವರ್ಷ ಜನವರಿಯಲ್ಲಿ ರಾಜ್ಯದ ಎಲ್ಲಾ ಇಲಾಖೆಯಲ್ಲಿ ವೃಂದವಾರು ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವುದು ಹಾಗೂ ವರ್ಷಕ್ಕೆ 2 ಬಾರಿ ಇಲಾಖಾ ಪದೋನ್ನತಿ ಸಮಿತಿಯ ಸಭೆಯನ್ನು ಏರ್ಪಡಿಸಿ ಪದೋನ್ನತಿ ನೀಡಬೇಕು. ಕೆಜಿಐಡಿ ಇಲಾಖೆಯ ಎಲ್ಲಾ ಕಚೇರಿಗಳನ್ನು ಗಣಕೀಕರಣಗೊಳಿಸುವ ಕಾರ್ಯವನ್ನು ಚುರುಕುಗೊಳಿಸಬೇಕು. ಕೆಜಿಐಡಿ ವಿಮಾ ಸೌಲಭ್ಯವನ್ನು ಈಗಿರುವ 55 ವರ್ಷಗಳ ಅವಧಿಯಿಂದ 60 ವರ್ಷಗಳಿಗೆ ಹೆಚ್ಚಳ ಮಾಡುವಂತೆ ಅವರು ಸಭೆಯಲ್ಲಿ ಒತ್ತಾಯಿಸಿರುವುದಾಗಿ ಅವರು ತಿಳಿಸಿದರು.

ನಿಗಮ-ಮಂಡಳಿ, ವಿಶ್ವವಿದ್ಯಾಲಯ, ಪ್ರಾಧಿಕಾರಗಳು, ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಸರ್ಕಾರದ ಸ್ವಾಯತ್ತ ಸಂಸ್ಥೆಗಳಲ್ಲಿ ಎಚ್’ಆರ್’ಎಂಎಸ್ ತಂತ್ರಾಂಶ ಅಳವಡಿಸುವ ಮೂಲಕ ವಿವಿಧ ಸೌಲಭ್ಯಗಳಿಂದ ವಂಚಿತ ನೌಕರರಿಗೆ ನ್ಯಾಯ ದೊಕಿಸಿಕೊಡಬೇಕು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಎಚ್’ಆರ್’ಎಂಎಸ್/ಕೆ-2 ತಂತ್ರಾಂಶದಲ್ಲಿ ಸಹಕಾರ ಸಂಸ್ಥಗಳಿಂದ ಪಡೆದ ಸಾಲದ ಕಂತುಗಳನ್ನು ಕಟಾವಣೆ ಮಾಡಲು ಅನುಕೂಲವಾಗುವಂತೆ ಸ್ಥಳೀಯ ಕಡಿತಗಳಿಗೆ ಅವಕಾಶ ಮಾಡಿಕೊಡಬೇಕು, ಸಾಮೂಹಿಕ ವಿಮಾ ಯೋಜನೆ(ಜಿಐಎಸ್)ಯಲ್ಲಿರುವ ವಂತಿಗೆ ಹಾಗೂ ವಿಮಾ ಮೊತ್ತವನ್ನು ಪ್ರಸ್ತುತ ಪರಿಸ್ಥಿತಿಗನುಗುಣವಾಗಿ ಹೆಚ್ಚಳ ಮಾಡುವಂತೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿರುವುದಾಗಿ ಅವರು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಗೃಹ ನಿರ್ಮಾಣ, ದುರಸ್ತಿ ಹಾಗೂ ಖರೀದಿಗೆ ಇರುವ ನಿಯಮಾವಳಿಗಳನ್ನು ಸರಳೀಕರಿಸುವುದು ಮತ್ತು ಮಂಜೂರು ಮಾಡುವ ಮುಂಗಡ ಮೊತ್ತವನ್ನು ಹೆಚ್ಚಳ ಮಾಡುವುದು, ಪ್ರತಿ ತಿಂಗಳ ಮೊದಲ ವಾರದೊಳಗಾಗಿ ನೌಕರರ ವೇತನವನ್ನು ಪಾವತಿ ಮಾಡುವುದು, ನೌಕರರಲ್ಲಿ ಕಾರ್ಯದಕ್ಷತೆ ಹೆಚ್ಚಳ ಹಾಗೂ ಸರ್ಕಾರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಆಡಳಿತ ತರಬೇತಿ ಕೇಂದ್ರ (ಎಟಿಐ) ಮಾದರಿಯಲ್ಲಿ ವಿಭಾಗ ಮಟ್ಟದಲ್ಲಿ ನೂತನ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವಂತೆಯೂ ಸಭೆಯಲ್ಲಿ ಅಧ್ಯಕ್ಷರ ಗಮನಕ್ಕೆ ತಂದಿರುವುದಾಗಿ ಎಂದರು.

ಸರ್ಕಾರಿ ನೌಕರರ ಬೇಡಿಕೆಗನುಗುಣವಾಗಿ ಜಿಲ್ಲಾ/ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ದರ್ಜೆವಾರು ವಸತಿ ಗೃಹಗಳನ್ನು ನಿರ್ಮಾಣ ಮಾಡುವುದು, ಸರ್ಕಾರಿ ನೌಕರರು ವಿದೇಶ ಪ್ರವಾಸ ಕೈಗೊಳ್ಳಲು ವಿಧಿಸಿರುವ ಷರತ್ತುಗಳನ್ನು ಸರಳೀಕರಿಸುವುದು, ಸರ್ಕಾರಿ ನೌಕರರು ಪಾಸ್ ಪೇರ್ಟ್ ಪಡೆಯಲು ನಿರಾಪೇಕ್ಷಣಾ ಪತ್ರ ನೀಡುವ ಅಧಿಕಾರವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಿಕೇಂದ್ರೀಕರಿಸುವ ಬಗ್ಗೆಯೂ ಸಹ ವಿಷಯ ಪ್ರಸ್ತಾಪಿಸಿರುವುದಾಗಿ ಅವರು ತಿಳಿಸಿದರು.

ಸರ್ಕಾರಿ ನೌಕರರು ಸೇವಾವಧಿಯಲ್ಲಿ ಚರ-ಸ್ಥಿರಾಸ್ತಿ ಖರೀದಿಸುವ ಪೂರ್ವದಲ್ಲಿ ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕೆಂಬ ನಿಬರ್ಂಧವನ್ನು ಸಡಿಲಿಸಿ, ಖರೀದಿಸಿದ ಮಾಹಿತಿಯನ್ನು ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ಮಾಡುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲು ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಬೇಕು, ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯದ ಆರು ಜಿಲ್ಲೆಗಳ ನೌಕರರು ಹಾಗೂ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಇನ್ನೊಂದು 371(ಜೆ) ಕಾನೂನು ಕೋಶವನ್ನು ಕಲಬುರಗಿಯಲ್ಲಿ ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಿರುವುದಾಗಿ ಅವರು ತಿಳಿಸಿದರು.

ಶಿಕ್ಷಣ ಇಲಾಖೆಯ ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು ಪದೋನ್ನತಿ ಹೊಂದಿದ ಸಂಧರ್ಭದಲ್ಲಿ ಅವರ ಹಿಂದಿನ ಸೇವಾಧಿಯನ್ನು ಪರಿಗಣಿಸಿ ಹತ್ತು ವರ್ಷಗಳ ಕಾಲಮಿತಿ ಬಡ್ತಿ, 15, 20, 25, 30 ವರ್ಷಗಳ ಹೆಚ್ಚುವರಿ ವೇತನ ಬಡ್ತಿಗಳನ್ನು ಮಂಜೂರು ಮಾಡಬೇಕು, ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ ಗುರುತಿಸಲ್ಪಟ್ಟಿರುವ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳನ್ನು ಆರೋಗ್ಯ ಇಲಾಖೆಯಲ್ಲಿ ಪದೋನ್ನತಿ ನೀಡುವ ಸಂದರ್ಭದಲ್ಲಿ ಪರಿಗಣಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು, ಇಲಾಖೆಗಳನ್ನು ವಿಲೀನಗೊಳಿಸುವ ಸಲುವಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿಯು ತನ್ನ ವರದಿ ಸಲ್ಲಿಸುವ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಸಮಾಲೋಚನೆ ನಡೆಸುವಂತೆ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಜೆ.ಸಿ. ಜಾಫರ್, ಸಂಘದ ಪದಾಧಿಕಾರಿ ಜಗದೀಶ್ ಪಾಟೀಲ್, ಆರ್. ಶ್ರೀನಿವಾಸ್, ಶಿವರುದ್ರಯ್ಯ, ವಿಭಾಗೀಯ ಉಪಾಧ್ಯಕ್ಷ ಆರ್. ಮೋಹನ್ ಕುವರ್, ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಹಾಗೂ ಸಂಬಂಧಿತ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUGovernment EmployeesKannadaNewsWebsiteLatestNewsKannadaState Government Employees Associationಬೆಂಗಳೂರುರಾಜ್ಯ ಸರ್ಕಾರಿ ನೌಕರರ ಸಂಘಸರ್ಕಾರಿ ನೌಕರರು
Share213Tweet123Send
Previous Post

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್’ಗಳಲ್ಲಿನ ಬೇಡಿಕೆಗಳ ಕುರಿತು ಸಮೀಕ್ಷೆಗೆ ಸೂಚನೆ

Next Post

ಇಂದು ಶಿವಮೊಗ್ಗದಲ್ಲಿ ಪತ್ತೆಯಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು? ಟ್ರಾವೆಲ್ ಹಿಸ್ಟರಿ ಇದೆಯಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಇಂದು ಶಿವಮೊಗ್ಗದಲ್ಲಿ ಪತ್ತೆಯಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು? ಟ್ರಾವೆಲ್ ಹಿಸ್ಟರಿ ಇದೆಯಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
ರಿಯಾ ಆಯಿಶಾಗೆ ಬಿಎ 9ನೇ ರ್‍ಯಾಂಕ್‌

ರಿಯಾ ಆಯಿಶಾಗೆ ಬಿಎ 9ನೇ ರ್‍ಯಾಂಕ್‌

May 5, 2026
ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

May 5, 2026
ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

May 5, 2026
ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL