ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಸೋಂಕಿಗೆ ದಾವಣಗೆರೆ ಜಿಲ್ಲೆಯ ಮಹಿಳೆಯೊಬ್ಬರು ಶಿವಮೊಗ್ಗದಲ್ಲಿ ಮೃತಪಟ್ಟಿದ್ದಾರೆ.
ಚನ್ನಗಿರಿಯ 56 ವರ್ಷದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದಲ್ಲದೇ ಮೃತ ಮಹಿಳೆ ಇನ್ನಿತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಿನ್ನೆ ರಾತ್ರಿ 1.30ರವೇಳೆಗೆ ಆಕೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Get In Touch With Us info@kalpa.news Whatsapp: 9481252093
Discussion about this post