ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಯೋಗ ತರಗತಿಯನ್ನು ಆರಂಭಿಸುವ ಕುರಿತಾಗಿ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಕುಟುಂಬಸ್ಥರೊಂದಿಗೆ ಯೋಗಾಭ್ಯಾಸ ನಡೆಸಿದ ನಂತರ ಅವರು ಮಾತನಾಡಿದರು.
ಯೋಗ ತರಗತಿಗಳನ್ನು ಆರಂಭಿಸುವ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂತಿಮ ನಿರ್ಧಾರಕ್ಕೆ ಬರುತ್ತೇವೆ. ದೈಹಿಕ ಶಿಕ್ಷಕರು ಯೋಗ ಕಲಿಸಬೇಕು. ಒಂದು ವೇಳೆ ಅವರಿಗೆ ಯೋಗ ಬರುವುದಿಲ್ಲ ಎಂದಾದರೆ, ಯೋಗ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಕಲಿಸುವ ಯೋಚನೆಯಿದೆ ಎಂದರು.
ಯೋಗ ದಿನದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿಯೇ ಈಶ್ವರಪ್ಪ ಯೋಗಾಭ್ಯಾಸ ನಡೆಸಿದರು. ಸಚಿವರ ಪತ್ನಿ ಜಯಲಕ್ಷ್ಮೀ, ಪುತ್ರ ಹಾಗೂ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ. ಕಾಂತೇಶ್, ಸೊಸೆ ಶಾಲಿನಿ ಸೇರಿದಂತೆ ಕುಟುಂಬಸ್ಥರು ಈಶ್ವರಪ್ಪ ಅವರೊಂದಿಗೆ ಯೋಗಾಭ್ಯಾಸ ನಡೆಸಿದರು.
Get In Touch With Us info@kalpa.news Whatsapp: 9481252093
















