ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಚಿವರು, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.
ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.
— Dr Sudhakar K (@mla_sudhakar) June 23, 2020
Get In Touch With Us info@kalpa.news Whatsapp: 9481252093
















