ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇಬ್ಬರಿಗೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಾಹಿ ಗಾರ್ಮೆಂಟ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ ಇಬ್ಬರು ಕಾರ್ಮಿಕರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ಕುರಿತಂತೆ ಜಿಲ್ಲಾಡಳಿತ ಯಾವುದೇ ರೀತಿಯ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ.
ಇನ್ನು, ಹೊಸನಗರದ ಪಾಶೆಟ್ಟಿಕೊಪ್ಪ ಗ್ರಾಮದ ಬೀಗರ ಊಟದಲ್ಲಿ ಪಾಲ್ಗೊಂಡಿದ್ದ ಓರ್ವ ಯುವಕನಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 82 ಮನೆಗಳಿರುವ ಇಡಿಯ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093

















