ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಉಪ್ಪಾರ ಬೀದಿಯ 46 ವರ್ಷದ ನಿವಾಸಿಯಾಗಿರುವ ಲಾರಿ ಚಾಲಕನಾಗಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು ಇಂದು ಸಂಜೆ ಮೆಗ್ಗಾನ್ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಅಧಿಕಾರಿಗಳು, ಈ ವ್ಯಕ್ತಿ ಜೂನ್ 19ರಂದು ತುಮಕೂರಿಗೆ ಹೋಗಿಬಂದ ನಂತರ ಜೂನ್ 22ರಂದು ಮೈ, ಕೈ ನೋವೆಂದು ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದರು. ಅಲ್ಲಿ ಆತನ ಪರೀಕ್ಷೆ ನಡೆಸಿದ ವೈದ್ಯರು ನಂತರ ಆತನನ್ನು ಜೂನ್ 23ಕ್ಕೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಅಲ್ಲಿ 24ರಂದು ಆತನ ಗಂಟಲ ದ್ರವ ಪರೀಕ್ಷೆ ನಡೆಸಿದ್ದಾರೆ. ಇಂದು ಮಧ್ಯಾಹ್ನ ಬಂದ ವರದಿಯಲ್ಲಿ ಆತನಿಗೆ ಕೊರೋನಾ ಸೋಂಕು ಧೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರ ಬೀದಿಯಲ್ಲಿರುವ ಆತನ ಮನೆಗೆ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ತತಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಸೋಂಕಿತ ವ್ಯಕ್ತಿಯ ಮನೆಯಲ್ಲಿ ಮಡದಿ ಮಕ್ಕಳು ಸೇರಿದಂತೆ ಮೂವರು ಇದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಸ್ಕ್ವಾಬ್ ಟೆಸ್ಟಿಂಗ್ ಮಾಡಿದ ನಂತರ ಸೀಲ್ ಡೌನ್ ಅವಧಿಯನ್ನು ನಿರ್ಧರಿಸಲಾಗುವುದು ಎನ್ನಲಾಗಿದೆ.
ಈ ಕುರಿತಂತೆ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ವ್ಯಕ್ತಿಯು ವಾಸವಿರುವ ಮನೆಯ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಪ್ರದೇಶವನ್ನು ಕಂಟೈನ್‌ಮೆಂಟ್ ಝೋನ್ ಎಂದು ಗುರುತಿಸಿ ಸೀಲ್ ಡೌನ್ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ 60 ಕುಟುಂಬಗಳಿದ್ದು ಮುನ್ನೂರು ಜನ ವಾಸವಿದ್ದಾರೆ. ಇದರ ಆಚೆಗೆಯಿರುವ ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಿದೆ. ಇಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರವೊಂದು ಸೇರಿದಂತೆ ನಾಲ್ಕು ಶಾಲೆ, ಮೂವತ್ತಕ್ಕೂ ಅಧಿಕ ಅಂಗಡಿಗಳಿಯಿವೆ. ಈ ವಲಯದ ಮೇಲೆ ನಿಗಾ ವಹಿಸಲಾಗುವುದು ಎಂದರು.
ಸ್ಥಳಕ್ಕೆ ತಹಶೀಲ್ದಾರ್ ಶಿವಕುಮಾರ್, ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ಗಾಯತ್ರಿ, ನಗರಸಭೆ ಕಂದಾಯ ಅಧಿಕಾರಿ ರಾಜ್’ಕುಮಾರ್, ಪರಿಸರ ಇಂಜನಿಯರ್ ರುದ್ರೇಗೌಡ, ಪೋಲಿಸ್ ಅಧಿಕಾರಿಗಳು ಸೇರಿದಂತೆ ಆನೇಕರು ಹಾಜರಿದ್ದು ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿದರು.
Get In Touch With Us info@kalpa.news Whatsapp: 9481252093
Discussion about this post