ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 13 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದು ಮಲೆನಾಡಿನ ಮಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಒಂದೇ ದಿನ 13 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.
ಅತ್ಯಂತ ಮಹತ್ವದ ವಿಚಾರವೆಂದರೆ ಪ್ರತಿದಿನವೂ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಮಾಹಿತಿಯಲ್ಲಿ ಸೋಂಕು ತಗಲುವ ಕಾರಣವನ್ನು ಉಲ್ಲೇಖಿಸುತ್ತದೆ. ಆದರೆ, ಇಂದಿನ ಮಾಹಿತಿಯಲ್ಲಿ ಯಾವುದೇ ರೀತಿಯ ಕಾರಣವನ್ನು ದಾಖಲಿಸದೇ ಇರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಅಲ್ಲದೇ, ಕೊರೋನಾ ವ್ಯಾಪಕವಾಗಿ ಸಮುದಾಯಕ್ಕೆ ಹರಡುತ್ತಿದೆಯೇ ಎಂಬ ಆತಂಕವನ್ನು ಸಾರ್ವಜನಿಕ ವಲಯದಲ್ಲಿ ಹುಟ್ಟುಹಾಕಿದೆ.
Get In Touch With Us info@kalpa.news Whatsapp: 9481252093
Discussion about this post