ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ತುಳುನಾಡಿನಲ್ಲಿ ಮತ್ತೆ ಕೊರೋನಾ ಅಬ್ಬರ ಆರಂಭವಾಗಿದ್ದು, ಇಂದು ಒಂದೇ ಕುಟುಂಬದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.
ಹೊರವಲಯದ ಉಳ್ಳಾಲದಲ್ಲಿ ಒಂದೇ ಕುಟುಂಬದ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪ್ರದೇಶವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ.
17 ಜನರಿದ್ದ ಕುಟುಂಬದ ಮಹಿಳೆಗೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮನೆಯನ್ನು ಸೀಲ್ ಡೌನ್ ಮಾಡಿ ಎಲ್ಲರನ್ನೂ ಕ್ವಾರಂಟೈನ್’ನಲ್ಲಿ ಇರಿಸಲಾಗಿತ್ತು. ಇಂದು ಕುಟುಂಬದ 12 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದು ಈ ಭಾಗದಲ್ಲಿ ಆತಂಕವನ್ನು ಹೆಚ್ಚಿಸಿದೆ.
Get In Touch With Us info@kalpa.news Whatsapp: 9481252093















