ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸರ್ಕಾರಿ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಳಿಗಿಂತ ಕೆಳಗಿರುವ ಬಡವರಿಗೆ ಸರ್ಕಾರವು ವಿತರಿಸುವ ಬಿ.ಪಿ.ಎಲ್.ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ ಎಂದು ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಎಸ್.ಬಿ. ಡಾ.ಶ್ರೀಪಾದ್ ತಿಳಿಸಿದ್ದಾರೆ.
ಇದು ಓರ್ವ ಸರ್ಕಾರಿ ನೌಕರರಿಗೆ ತರವಲ್ಲದ ಕಾರ್ಯವಾಗಿದ್ದು, ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಳಿಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವನ್ನು ಇದನ್ನು ಓರ್ವ ಸರ್ಕಾರಿ ನೌಕರರು ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಸರ್ಕಾರಿ ನೌಕರ, ಅಧಿಕಾರಿ ಆಗಿರುವವರು ಸರ್ಕಾರದಿಂದ ವೇತನ, ಭತ್ಯೆ ಮತ್ತಿತರ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ ಎಂದಿದ್ದಾರೆ.
ಆದ್ದರಿಂದ ಇಂತಹ ಸೌಲಭ್ಯವನ್ನು ಪಡೆದುಕೊಂಡಿರುವವರು 2020ರ ಜುಲೈ 10ರೊಳಗಾಗಿ ಪಡಿತರ ಚೀಟಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಹಿಂದಿರುಗಿಸಿ, ಅಮಾನ್ಯಗೊಳಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಎಚ್ಚರಿಕೆಯ ನಂತರವೂ ಕಾರ್ಡುಗಳನ್ನು ಹೊಂದಿದ್ದು, ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದಲ್ಲದೇ ಅವರಿಗೆ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post