ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಂದು ಮುಂಜಾನೆ ನಗರದಲ್ಲಿ ಏಳು ಕೊರೋನಾ ಪಾಸಿಟಿವ್ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ 35 ವರ್ಷದ ಮಹಿಳೆಯೋರ್ವರಲ್ಲಿ ಕೊರೋನಾ ದೃಢಪಟ್ಟಿದ್ದು, ಉಪ್ಪಾರ ಬೀದಿಯಲ್ಲಿ ಪಾಸಿಟಿವ್ ಬಂದ ವ್ಯಕ್ತಿಯಿಂದಲೇ ಸೋಂಕು ತಗುಲಿದೆ ಎಂದು ಹೇಳಲಾಗಿದೆ.
ಹೊಸಮನೆ ಮುಖ್ಯರಸ್ತೆಯಲ್ಲಿನ ಮಾರಿಯಮ್ಮ ದೇವಾಲಯದ ಮುಂಭಾಗದಿಂದ ರೈಸ್ ಮಿಲ್ ಹಿಂಭಾಗದ ಇರುವ ಅಮ್ಮನವರ ದೇವಾಲಯದ ಕ್ರಾಸ್’ವರೆಗೂ ಮಾತ್ರ ಸೀಲ್ ಡೌನ್ ಮಾಡಲಾಗಿದೆ.
14 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು, ಈ ರಸ್ತೆಯ ನಿವಾಸಿಗಳು ಯಾವುದೇ ಕಾರಣಕ್ಕೂ ಹೊರಕ್ಕೆ ಬಾರದಂತೆ ಸೂಚಿಸಲಾಗಿದೆ.
Get In Touch With Us info@kalpa.news Whatsapp: 9481252093
















