ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮೂರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 176ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯಲ್ಲಿ ಇಂದು ಮೂವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇಂದು ಗುಣಮುಖರಾಗಿ ಯಾರೂ ಸಹ ಆಸ್ಪತ್ರೆಯಿಂದ ಬಿಡುಗಡೆ ಹೊಂದಿಲ್ಲ.
ಐಎಲ್’ಐ ಹಿನ್ನೆಲೆಯ 40 ವರ್ಷದ ಪುರುಷ, 21 ಹಾಗೂ 40 ವರ್ಷದ ಇಬ್ಬರು ಪುರುಷರು ಅಂತರ ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿರುವವರಲ್ಲಿ ಸೋಂಕು ದೃಢಪಟ್ಟಿದೆ.
Get In Touch With Us info@kalpa.news Whatsapp: 9481252093

















