ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಭಾರತ ಹಾಗೂ ಚೀನಾ ನಡುವಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವಂತೆಯೇ ಲಡಾಕ್ ರಾಜಧಾನಿ ಲೇಹ್’ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇಂದು ಮುಂಜಾನೆ 8.25ಕ್ಕೆ ಲೇಹ್’ಗೆ ಭೇಟಿ ನೀಡಿರುವ ಪ್ರಧಾನಿಯವರು ನಿಮೋ ಪ್ರದೇಶದಲ್ಲಿ ಭಾರತೀಯ ಸೇನಾ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರು ಪ್ರಧಾನಿಯವರೊಂದಿಗೆ ತೆರಳಿದ್ದಾರೆ.
ಲಡಾಖ್ನಲ್ಲಿ ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯು ಉಭಯ ದೇಶಗಳ ಸೈನ್ಯಗಳ ನಡುವೆ ದೀರ್ಘಕಾಲದ ಮುಖಾಮುಖಿಯಾಗುತ್ತಿದೆ. ಈ ವೇಳೆಯಲ್ಲಿ ಪ್ರಧಾನಿ ಮೋದಿ ಮತ್ತು ಜನರಲ್ ರಾವತ್ ಅವರ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.
Get In Touch With Us info@kalpa.news Whatsapp: 9481252093
Discussion about this post