ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಗುಡ್ಡೇಕಲ್ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತಂತೆ ಹೇಳಿಕೆ ನೀಡಿರುವ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎಂ. ಲೋಕೇಶ್, ಕೋವಿಡ್19 ವೈರಸ್ ಹರಡುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಧಾರ್ಮಿಕಾ ಕಾರ್ಯಕ್ರಮ ನಿಷೇಧಿಸಿರುವುದರಿಂದ ಸಮೀಪದ ಗುಡ್ಡೇಕಲ್‌ನ ಶ್ರೀ ಬಾಲಸುಬ್ಯಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 11 ಮತ್ತು 12 ರಂದು ನಡೆಯಬೇಕಿದ್ದ ಆಡಿಕೃತ್ತಿಕೆ ಜಾತ್ರೆಯನ್ನು ರದ್ದು ಪಡಿಸಲಾಗಿದೆ. ಅಂದು ದೇವಸ್ಥಾನದ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತಾಧಿಗಳು ಸಹಕರಿಸುವಂತೆ ಕೋರಿದ್ದಾರೆ.
Get In Touch With Us info@kalpa.news Whatsapp: 9481252093
















