ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೀದರ್: ತಾಲೂಕಿನ ಕಮಠಾಣಾ ಗ್ರಾಮದಲ್ಲಿ ಕೆಕೆಆರ್’ಡಿಬಿ ಅನುದಾನದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದಿಲ್ಲಿ ಮಾದರಿಯ ಶಾಲೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಲಿದೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ತಾಲೂಕಿನ ಕಮಠಾಣಾ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಕೆಕೆಆರ್’ಡಿಬಿ ಅನುದಾನದಲ್ಲಿ ನೂತನವಾಗಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ಗ್ರಾಮೀಣ ಶಾಲೆಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಆ ನಿಟ್ಟಿನಲ್ಲಿ ಒಳ್ಳೆಯ ವ್ಯವಸ್ಥೆಯಾಗಬೇಕಾಗಿದ್ದು, ನಾನು ಮೊದಲನೇ ಹಂತದಲ್ಲಿ ಮೂರು ಕೋಟಿ ರೂ. ವೆಚ್ಚದ ಬಿಲ್ದಿಂಗ್ ತಂದಿದ್ದೇನೆ ಎಂದರು.
ಮುಂದಿನ ಬಜೆಟ್ ನಲ್ಲಿ ಈ ಶಾಲೆಗೆ 16 ಸ್ವಾರ್ಟ್ ಕ್ಲಾಸ್ ರೂಮ್ ಗಳನ್ನು ತರುತ್ತೇನೆ. ಒಳ್ಳೆಯ ಬಿಲ್ಡಿಂಗ್, ಸ್ವಾರ್ಟ್ ಕ್ಲಾಸ್ ಸೇರಿದಂತೆ ವಿನೂತನ ವ್ಯವಸ್ಥೆ ತರುವ ಮೂಲಕ ಕಮಠಾಣಾ ಗ್ರಾಮದ ದಿಲ್ಲಿ ಮಾದರಿಯ ಶಾಲೆಯನ್ನು ಇತರೆ ಶಾಲೆಗಳಿಗೆ ಮಾದರಿ ಶಾಲೆಯನ್ನಾಗಿ ಮಾಡುತ್ತೇನೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯಗುರುಗಳು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರಿದ್ದರು.
Get In Touch With Us info@kalpa.news Whatsapp: 9481252093
Discussion about this post