ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಕ್ಷಿಣ ಕನ್ನಡ: ಕೊರೋನಾ ವೈರಸ್ ನೆಪದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಡವರ ಬಳಿ ಹಣವಿಲ್ಲದೇ ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಆದಷ್ಟು ಬೇಗ ಪರಿಹರಿಸಬೇಕು. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳು ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕು. ಅದು ಬಿಟ್ಟು ಜನರಿಂದ ಹಣ ವಸೂಲಿ ದಂಧೆ ಮಾಡಬಾರದು ಎಂದಿದ್ದಾರೆ.
ಸರ್ಕಾರ ಇದಕ್ಕೆ ಕಡಿವಾಣ ಆದಷ್ಟು ಬೇಗ ಹಾಕಬೇಕು. ಇಲ್ಲವಾದಲ್ಲಿ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಉಂಟಾಗುತ್ತದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093

















