ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸಮಾಜದ ಸ್ವಾಸ್ಥ್ಯ ಹಾಳಾಗುವಂತಹ, ಸಾರ್ವಜನಿಕರನ್ನು ಭಯಭೀತರನ್ನಾಗಿ ಮಾಡುವಂತಹ ಯಾವುದೇ ರೀತಿಯ ವಿವಾದಾತ್ಮಕ ಸುದ್ದಿ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ಎಚ್. ಹಾಲಪ್ಪ ಸೂಚಿಸಿದರು.
ಕೊರೋನಾ ವೈರಸ್ ನಿಯಂತ್ರಣದ ಬಗ್ಗೆ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಯವರು ಸಹಮತದೊಂದಿಗೆ ಕರ್ತವ್ಯ ನಿರ್ವಹಿಸಿ, ಅನಗತ್ಯವಾಗಿ ಹಾಗೂ ಮಾಸ್ಕ್ ಇಲ್ಲದೆ ಸಂಚರಿಸುವವರು, ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸುದ್ದಿ ಪ್ರಕಟಿಸುವವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೊರ ಜಿಲ್ಲೆಗಳಿಂದ ಅಗಮಿಸುವವರ ಬಗ್ಗೆ ನಿಗಾ ವಹಿಸುವಂತೆ, ಕಂಟೈನ್ಮೆಂಟ್ ಝೋನ್’ಗಳಲ್ಲಿರುವವರಿಗೆ ತೊಂದರೆಯಾಗದಂತೆ ಅಗತ್ಯ ವಸ್ತುಗಳನ್ನು ಪೂರೈಸಬೇಕು. ಗ್ರಾ.ಪಂಗಳಿಗೆ ತಾಲೂಕು ಹಂತದ ಆಡಳಿತಾಧಿಕಾರಿಗಳ ನೇಮಕವಾಗಿದೆ. ತಮ್ಮ ಇಲಾಖೆ ಕೆಲಸದೊಂದಿಗೆ, ನಿಯೋಜಿಸಿರುವ ಗ್ರಾ.ಪಂಗಳಿಗೆ ಭೇಟಿ ನೀಡಿ ಸಲಹೆಗಳನ್ನು ನೀಡಿ ಸಾರ್ವಜನಿಕರ ಕೆಲಸಗಳು, ಕೋವಿಡ್19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಟಿಎಚ್’ಒ, ಕೊರೋನಾ ಕಾರ್ಯಪಡೆಯವರು, ಅರಣ್ಯ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post