ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮೈಸೂರು: ಕ್ವಾರಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋಣ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದು, ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ.
ಹೈದರಾಬಾದ್’ನಿಂದ ವಾಪಾಸಾಗಿದ್ದ ಪ್ರತಾಪ್’ಗೆ ಹೋಂ ಕ್ವಾರಂಟೈನ್’ನಲ್ಲಿ ಇರಲು ಸೂಚಿಸಲಾಗಿತ್ತು. ಆದರೆ, ಇದನ್ನು ಉಲ್ಲಂಘಿಸಿ ಜುಲೈ 16ರಂದು ಸುದ್ದಿವಾಹಿನಿಯೊಂದರ ಸಂದರ್ಶನ ಕಾರ್ಯಕ್ರಮದಲ್ಲಿ ಆತ ಪಾಲ್ಗೊಂಡಿದ್ದರು. ಅಲ್ಲದೇ, ಆನಂತರ ಮನೆಯಲ್ಲೂ ಸಹ ಇರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.
ಆನಂತರ ಪಶುವೈದ್ಯ ಹಾಗೂ ವಿಧಿವಿಜ್ಞಾನ ತಜ್ಞ ಡಾ.ಎಚ್.ಎಚ್. ಪ್ರಯಾಗ್ ಅವರು ತಲಘಟ್ಟಪುರ ಠಾಣೆಗೆ ದೂರು ನೀಡಿದ್ದರು. ಎಫ್’ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಈತನ ಬಂಧನಕ್ಕೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು.
ಮೈಸೂರಿನಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿದ್ದ ಪ್ರತಾಪ್’ರನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಸದ್ಯಕ್ಕೆ ಅವರನ್ನು ಸಾಂಸ್ಥಿಕ ಕ್ವಾರಂಟೈನ್’ಗೆ ಒಳಪಡಿಸಿ, ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿದುಬಂದಿದೆ.
Get In Touch With Us info@kalpa.news Whatsapp: 9481252093
Discussion about this post