ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮೂಲಗಳ ಅನ್ವಯ ಶ್ರೀಗಳು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಶ್ರೀಗಳಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಮಣಿಪಾಲದ ಕೆ.ಎಂ.ಸಿ.ಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಆರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ.
Get In Touch With Us info@kalpa.news Whatsapp: 9481252093

















